ಹೊಸಪೇಟೆ, ನ.29(Daijiworld News/SS): ಚುನಾವಣೆ ಮುಗಿಯುತ್ತಿದ್ದಂತೆಯೇ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ. ಮತ್ತೆ ನಾನೇ ಸಿಎಂ ಆಗುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಮಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಜನ ನಿರ್ಧರಿಸಿದ್ದಾರೆ. ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದೆ. ಈ ಉಪ ಚುನಾವಣೆಯ ಬಳಿಕ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದು, ಮತ್ತೂಮ್ಮೆ ನಾನೇ ಮುಖ್ಯಮಂತ್ರಿಯಾಗುತ್ತೇನೆ ಇದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.