ಬೆಂಗಳೂರು, ನ.29(Daijiworld News/SS): ಮಹಾರಾಷ್ಟ್ರದ ನೂತನ ಸರ್ಕಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಶುಭ ಕೋರಿದ್ದಾರೆ.
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ರಾಜ್ಯದ 19ನೇ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇದರ ಬೆನ್ನಲ್ಲೇ ನೂತನ ಸರ್ಕಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಶುಭಾಶಯ ಕೋರಿದ್ದಾರೆ.
ನಮ್ಮ ರಾಷ್ಟ್ರವನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವ ಪ್ರಜಾಪ್ರಭುತ್ವದ ಬಟ್ಟೆಯನ್ನು ನಾಶಮಾಡಲು ಪ್ರಯತ್ನಿಸುವವರ ಮುಖಕ್ಕೆ ಇದು ಬಿಗಿಯಾದ ಹೊಡೆತವಾಗಿದೆ ಎಂದು ಬಿಜೆಪಿಗೂ ಟ್ವೀಟ್ ಏಟು ಕೊಟ್ಟಿದ್ದಾರೆ.
ಈ ಹಿಂದೆಯೂ ಮಹಾರಾಷ್ಟ್ರ ರಾಜಕಾರಣ ಕರ್ನಾಟಕಕ್ಕೂ ಅನ್ವಯವಾಗುತ್ತದೆ. ಕರ್ನಾಟಕದಲ್ಲೂ ಏನೂ ಬೇಕಾದರೂ ಆಗಬಹುದು. ಉಪಚುನಾವಣೆ ಬಳಿಕ ಏನಾಗುತ್ತೆಂದು ಕಾದು ನೋಡಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿಕೆ ನೀಡಿದ್ದರು.