ಬೆಂಗಳೂರು, ನ.29(Daijiworld News/SS): ಕಳೆದ ಆಗಸ್ಟ್ ತಿಂಗಳಿನಿಂದ ಅಕ್ಟೋಬರ್ವರೆಗೆ ಸುರಿದ ಸತತ ಮಳೆ ಮತ್ತು ಪ್ರವಾಹ ಸ್ಥಿತಿಯಿಂದಾಗಿ ಲಕ್ಷಾಂತರ ಎಕರೆ ಈರುಳ್ಳಿ ಬೆಳೆ ನೀರು ಪಾಲಾಗಿ ಹೋಗಿದೆ. ಈ ಹಿನ್ನೆಲೆ ಈರುಳ್ಳಿ ಬೆಲೆ ಗಗನಕ್ಕೇರಿದೆ.
ಸದ್ಯ ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ನೂರರ ಗಡಿ ದಾಟಿದ್ದರೂ ಸ್ಥಳೀಯ ಮಾರುಕಟ್ಟೆಯಲ್ಲಿ 50-8೦ ರೂ.ವರೆಗೆ ಇದೆ. ಆದರೆ ಮಧ್ಯವರ್ತಿಗಳ ಹಾವಳಿ ಪರಿಣಾಮ ರೈತರ ಕೈಗೆ ಇಷ್ಟೊಂದು ಬೆಲೆ ಸಿಕ್ಕುತ್ತಿಲ್ಲ. ಸಾಧಾರಣ ಗುಣಮಟ್ಟದ ಈರುಳ್ಳಿಯನ್ನು ರೈತರು ಮಾರುಕಟ್ಟೆಗೆ ತಂದು 40-60 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ಗುಣಮಟ್ಟದ ಈರುಳ್ಳಿಯನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಆದರೆ ಅಲ್ಲಿಯೂ ಅವರಿಗೆ ಸಿಕ್ಕುತ್ತಿರುವುದು 5-6 ಸಾವಿರ ರೂ. ಎನ್ನಲಾಗುತ್ತಿದೆ.
ರೈತ ಬಹುತೇಕ ಸಮೂಹಕ್ಕೆ ಈರುಳ್ಳಿ ಬೆಳೆದರೂ ನಿರೀಕ್ಷಿತ ಲಾಭ ಕೈ ಸೇರಿಲ್ಲ. ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆಯ ಲಾಭ ದಲ್ಲಾಳಿ(ಮಧ್ಯವರ್ತಿಗಳು)ಗಳ ಕಿಸೆ ಸೇರತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ.
ಬೆಂಗಳೂರಿಗೆ ಹೆಚ್ಚಿನ ಪ್ರಮಾಣದ ಈರುಳ್ಳಿ ಪೂರೈಕೆ ಆಗುವುದೇ ಉತ್ತರ ಕರ್ನಾಟಕದ ಬಾಗಲಕೋಟೆ, ವಿಜಯಪುರ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಂದ. ಆದರೆ ಪ್ರಸಕ್ತ ವರ್ಷ ಮಾರುಕಟ್ಟೆಯಲ್ಲಿ ಈರುಳ್ಳಿಗೆ ಬೆಲೆ ಇದ್ದರೂ ಪ್ರಯೋಜನವಿಲ್ಲ ಎನ್ನುವಂತಾಗಿದೆ.