ಹೈದರಾಬಾದ್, ನ 30(Daijiworld News/MSP): ತೆಲಂಗಾಣದಲ್ಲಿ 22 ವರ್ಷದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಗ್ಯಾಂಗ್ ರೇಪ್ ಎಸಗಿ ಆಕೆಯನ್ನು ಜೀವಂತ ದಹಿಸಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಸಂಬಂಧ ನಾಲ್ವರರು ಆರೋಪಿಗಳನ್ನು ಬಂಧಿಸಲಾಗಿದೆ.
ಏತನ್ಮಧ್ಯೆ ಪಶು ವೈದ್ಯೆ ಶವ ಪತ್ತೆಯಾದ ಜಾಗದಲ್ಲೇ ಮತ್ತೊಬ್ಬ ಮಹಿಳೆಯ ಶವ ಪತ್ತೆಯಾಗಿದೆ. ಆ ಮಹಿಳೆಯ ಶವವೂ ಅರೆಬೆಂದ ಸ್ಥಿತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ಹತ್ಯೆಗಳು ಒಂದೇ ರೀತಿಯಲ್ಲಿ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಶಂಶಾಬಾದ್ ನ ಸಿಡ್ಲುಗುಟ್ಟಾ ರಸ್ತೆ ಸಮೀಪವೇ 35 ವರ್ಷ ಪ್ರಾಯದ ಮಹಿಳೆಯ ಶವ ಪತ್ತೆಯಾಗಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಸೈಬರಾಬಾದ್ ಪೊಲೀಸ್ ಕಮಿಷನರ್ ವಿಸಿ ಸಜ್ಜನಗರ್ ತಿಳಿಸಿದ್ದಾರೆ. ಈ ಎರಡೂ ಪ್ರಕರಣಗಳಿಗೂ ಒಂದಕ್ಕೊಂದು ಸಂಬಂಧ ಇದೆಯೇ ಎಂಬುವುದನ್ನು ಎಂಬುದನ್ನು ಪೊಲೀಸರು ಖಚಿತಪಡಿಸಿಲ್ಲ.