ಬೆಂಗಳೂರು, ಅ.23 (DaijiworldNews/AA): ಜನಗಣತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪಬ್ಲಿಕ್ ಪರೀಕ್ಷೆಗಳು ಮುಂದೂಡಿಕೆಯಾಗುವ ಸಾಧ್ಯತೆ ಇದೆ.

ಜನವರಿಯಿಂದ ಕೇಂದ್ರ ಸರ್ಕಾರದ ಜನಗಣತಿ 2ನೇ ಹಂತ ಪ್ರಾರಂಭವಾಗಲಿದೆ. ಈ ಹಿನ್ನೆಲೆ ಎಸ್ಎಸ್ಎಲ್ಸಿ, ಪಿಯುಸಿ ಪಬ್ಲಿಕ್ ಪರೀಕ್ಷೆ ಮುಂದೂಡುವಂತೆ ಕೇಂದ್ರ ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯವು ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದಿದೆ.
ಕೇಂದ್ರದ ಎರಡನೇ ಸುತ್ತಿನ ಜನಗಣತಿ ಜನವರಿ 25ರಿಂದ ಫೆಬ್ರವರಿ 28ರವರೆಗೆ ನಡೆಯಲಿದೆ. ಮಾರ್ಚ್ 1 ರಿಂದ 5 ವರೆಗೆ ಪರಿಷ್ಕರಣಾ ಸುತ್ತು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ-ಮಾರ್ಚ್ನಲ್ಲಿ ನಡೆಯಲಿರುವ ಪರೀಕ್ಷೆ ಮುಂದೂಡುವಂತೆ ಕೋರಲಾಗಿದೆ.
ಈಗಾಗಲೇ ಎಸ್ಎಸ್ಎಲ್ಸಿ-ಪಿಯುಸಿ ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಎಕ್ಸಾಂ ಬೋರ್ಡ್ ಬಿಡುಗಡೆ ಮಾಡಿದೆ. ಒಂದು ವೇಳೆ ಪರೀಕ್ಷೆ ಮುಂದೂಡಿಕೆಯಾದರೆ ಹೊಸ ವೇಳಾಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.