ಬೆಂಗಳೂರು, ಅ.23 (DaijiworldNews/AK): ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಗ್ರಮ ಪರಿಷ್ಕರಣೆ ಪ್ರಕ್ರಿಯೆ ಇದೀಗ ಮುಕ್ತಾಯ ಹಂತಕ್ಕೆ ತಲುಪಿದೆ. ಆಕ್ಷೇಪಣೆ ಸಲ್ಲಿಸಲು ಇದ್ದ ಕಾಲಾವಕಾಶ ಅಕ್ಟೋಬರ್ 22ರಂದು ಮುಕ್ತಾಯಗೊಂಡಿದೆ. ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.

ಇದೀಗ ರಾಜ್ಯ ಚುನಾವಣಾ ಆಯೋಗ ಮತದಾರರ ಪಟ್ಟಿ ವಿಶೇಷ ಸಗ್ರಮ ಪರಿಷ್ಕರಣೆಯ ಮಾಹಿತಿಯನ್ನು ನೀಡಿದೆ. ಈ ಕುರಿತಾಗಿ ರಾಜ್ಯ ಚುನಾವಣಾ ಆಯೋಗ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ಪರಿಶೀಲನೆಗಾಗಿ ಅನೇಕ ಜನರಿಗೆ ನೋಟಿಸ್ಗಳನ್ನು ನೀಡಲಾಗಿತ್ತು. ರಾಜ್ಯಾದ್ಯಂತ ಒಟ್ಟು 43,82,313 ನೋಟಿಸ್ ಜಾರಿ ಮಾಡಲಾಗಿತ್ತು. ವಿತರಿಸಲಾದ ಎಲ್ಲಾ 43,82,824 ನೋಟಿಸ್ಗಳ ವಿಚಾರಣೆಯನ್ನು ಪೂರ್ಣಗೊಳಿಸಲಾಗಿದೆ.
ಇನ್ನು ಮುಖ್ಯವಾಗಿ, ಸೆಪ್ಟೆಂಬರ್ 23ರವರೆಗೆ ಬಂದ ಎಲ್ಲಾ ಫಾರ್ಮ್ 7 ಅರ್ಜಿಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ. ಅಂದರೆ ಅರ್ಜಿಗಳನ್ನು ಪರಿಶೀಲಿಸಿ ಅವುಗಳ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.