ಬೆಂಗಳೂರು, ಡಿ 1 (Daijiworld News/MB) : ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಮಧ್ಯಂತರ ಚುನಾವಣೆಯ ಜಪ ಮಾಡುತ್ತಿದ್ದಾರೆ. ಅವರಿಗೆ ಆಗುವುದು ಬೇಕಾಗಿಲ್ಲ. ನಾವು ೧೫ ಕ್ಷೇತ್ರದಲ್ಲೂ ಗೆಲುವು ಸಾಧಿಸುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ನವರು ಮತ ಎಣಿಕೆ ಆರಂಭವಾಗುತ್ತಿದ್ದಂತೆ ಮತ ಎಣಿಕೆ ಕೇಂದ್ರದಿಂದಲ್ಲೇ ಓಡಿ ಹೋಗುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಯಶವಂತಪುರ ಹಾಗೂ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರ ವ್ಯಾಪ್ತಿಯಲ್ಲಿ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಜನತೆಯನ್ನು ಉದ್ದೇಶಿಸಿ ಮಾತಾನಾಡಿದ ಅವರು, ಅಭಿವೃದ್ಧಿ ಹೊಂದುವುದೇ ನಮ್ಮ ಮುಖ್ಯ ಗುರಿ. ಸುಭದ್ರ ಸರಕಾರದ ಅಗತ್ಯವಿದೆ. ಬಿಜೆಪಿ ಅಭ್ಯರ್ಥಿಯನ್ನು ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕೂಡಾ ಬೆಂಬಲಿಸಿ ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಟಿ ಸೋಮಶೇಖರ್ ಮಾತಾನಾಡಿ, 15 ತಿಂಗಳ ಆಡಳಿತಾವಧಿಯಲ್ಲಿ ಮೈತ್ರಿ ಸರ್ಕಾರ ಕ್ಷೇತ್ರದ ಅಭಿವೃದ್ಧಿಗಾಗಿ ಯಾವುದೇ ಅನುದಾನ ನೀಡಲಿಲ್ಲ. ಆದರೆ ಕೇವಲ 3 ತಿಂಗಳೊಳಗೆ ಯಡಿಯೂರಪ್ಪ 750 ಕೋಟಿ ರೂ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.