ಮುಂಬೈ, ಡಿ 1 (Daijiworld News/MB) : ಕಾಂಗ್ರೆಸ್ ರೈತ ನಾಯಕ ನಾನಾ ಪಟೋಲೆ ಮಹಾರಾಷ್ಟ್ರ ಸ್ಪೀಕರ್ ಆಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಕಿಸಾನ್ ಕಠೋರೆ ಬಿಜೆಪಿಯಿಂದ ನಾಮನಿರ್ದೇಶನಗೊಂಡಿದ್ದರು. ಆದರೆ, ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಯನ್ನು ಭಾನುವಾರ ಬೆಳಗ್ಗೆ ಹಿಂಪಡೆದಿದ್ದು ಪಟೋಲೆ ಅವಿರೋಧವಾಗಿ ಆಯ್ಕೆಯಾದರು.
ಸಭೆಯ ಗೌರವವನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಬೇರೆ ಶಾಸಕರ ಮನವಿ ಮೇರೆಗೆ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಯನ್ನು ಹಿಂಪಡೆದಿದೆ ಎಂದು ಎನ್ ಸಿಪಿ ಮುಖಂಡ ಚಗನ್ ಭುಜಬಲ್ ತಿಳಿಸಿದರು.
ನಾನ ಪಟೋಲೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರಿದ್ದು ಈವರೆಗೂ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಇವರು ವಿದರ್ಭದ ಸಕೋಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕೃಷಿ ಕುಟುಂಬದಿಂದ ಬಂದು 2014ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಸೇರಿ ಭಂಡಾರ-ಗೊಂಡಿಯಾ ಕ್ಷೇತ್ರದಲ್ಲಿ ಎನ್ ಸಿಪಿಯ ಪ್ರಪುಲ್ ಪಟೇಲ್ ಅವರನ್ನು ಸೋಲಿಸಿದ್ದರು.