ಚೆನ್ನೈ, ಡಿ.02(Daijiworld News/SS): ವಾಯುಭಾರ ಕುಸಿತದ ಪರಿಣಾಮ ನೆರೆಯ ತಮಿಳುನಾಡಿನಲ್ಲಿ ಮಳೆ ಆರ್ಭಟ ಹೆಚ್ಚಿದ್ದು, ಕರಾವಳಿ ಪ್ರದೇಶಗಳಲ್ಲಿ'ಆರೇಂಜ್ ಅಲರ್ಟ್' (ಭಾರಿ ಮಳೆ ಸಾಧ್ಯತೆ) ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ 10ಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಮುಂದಿನ ಎರಡು ದಿನವೂ ಮಳೆ-ಚಳಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಗಳು ಕುಸಿದು ಬಿದ್ದ ಪರಿಣಾಮ 10 ಮಹಿಳೆಯರು, 2 ಮಕ್ಕಳು ಸೇರಿ ಒಟ್ಟು 15 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಭವಿಸಿದೆ. ಇನ್ನೆರೆಡು ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತಿರುವಳ್ಳೂರ್, ವೆಲ್ಲೂರ್, ತಿರುವಣ್ಣಾಮಲೈ, ತೂತ್ತುಕುಡಿ, ರಾಮನಾಥಪುರಂ ಮತ್ತು ತಿರುನಲ್ವೇಲಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಗಳು ಮುನ್ಸೂಚನೆ ನೀಡಿದ್ದು, ಈಗಾಗಲೇ ಈ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.