ನವದೆಹಲಿ, ಡಿ 2 (Daijiworld News/MB) : ಹೈದರಾಬಾದ್ನಲ್ಲಿ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಹೇಳಿಕೆ ನೀಡಿದ್ದು ಅದೀಗ ತೀವ್ರ ವಿವಾದಕ್ಕೆ ಒಳಗಾಗಿದೆ.
ಮಹಿಳೆಯರ ಮೇಲಿನ ಅಪರಾಧ ಘಟನೆಗಳು ಹೆಚ್ಚಾಗುತ್ತಿರುವ ವಿಚಾರದ ಬಗ್ಗೆ ನಡೆದ ಚರ್ಚೆಯೊಂದರಲ್ಲಿ ಮಾತನಾಡುತ್ತಿದ ಅವರು ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ತಂದು ನಿಲ್ಲಿಸಿ ಥಳಿಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಈ ಹೇಳಿಕೆ ತೀವ್ರ ವಿವಾದಕ್ಕೆ ಒಳಗಾಗಿದ್ದು ಜಯಾ ಬಚ್ಚನ್ ಒಬ್ಬ ಜವಾಬ್ದಾರಿಯುತ ಸಂಸದೆಯಾಗಿ ಹಿಂಸಾತ್ಮಕ ಮಾರ್ಗದ ಸಲಹೆ ನೀಡಿದ್ದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ವಾರ ಹೈದರಾಬಾದ್ನಲ್ಲಿ 26 ವರ್ಷದ ಪಶುವೈದ್ಯೆಯೊಬ್ಬರ ಮೇಲೆ ನಾಲ್ಕು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆಗೈದಿದ್ದರು. ಮಹಿಳೆಯ ಟಯರ್ ಪಂಕ್ಚರ್ ಆದಾಗ ಸಹಾಯ ಮಾಡುವ ನೆಪದಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದರು. ಈ ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.