ನವದೆಹಲಿ, ಡಿ 2 (Daijiworld News/MB) : ಟೆಲಿಕಾಂ ಕಂಪನಿಗಳ ದರ ಏರಿಕೆ ಮಾಡಲು ಕೇಂದ್ರ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದ್ದು, ಈ ಕುರಿತು ಮಾತಾನಾಡಿದ ಕಾಂಗ್ರೆಸ್ ಸಂಸದ ಪ್ರತಾಪ್ ಸಿಂಗ್ ಬಜ್ವಾ ಟೆಲಿಕಾಂ ಕಂಪನಿಗಳು ಟಾರಿಫ್ ಪ್ಲಾನ್ಗಳ ದರವನ್ನು ಹೆಚ್ಚಿಸಿ ಗ್ರಾಹಕರನ್ನು ಸುಲಿಗೆ ಮಾಡುತ್ತಿದ್ದು ಈಸ್ಟ್ ಇಂಡಿಯಾ ಕಂಪನಿ ರೀತಿ ವರ್ತನೆ ಮಾಡುತ್ತಿದೆ. ಇದನ್ನು ಕೇಂದ್ರ ಸರ್ಕಾರ ನಿಯಂತ್ರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹಲವು ಟೆಲಿಕಾಂ ಕಂಪನಿಗಳು ಡಿಸೆಂಬರ್ 3 ರಿಂದ ಡೇಟಾ ದರವನ್ನು ಶೇ.15ರಿಂದ 47 ರಷ್ಟು ಹೆಚ್ಚಳ ಮಾಡುವುದಾಗಿ ತಿಳಿಸಿದ್ದು ಈ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಏಕಾಏಕಿ ಟಾರಿಫ್ ದರ ಹೆಚ್ಚಿಸುವುದು ಸುಲಿಗೆಗಿಂತ ಕಡಿಮೆಯೇನಲ್ಲ. ಈ ಮೊದಲು ಕರೆ ಹಾಗೂ ಡೇಟಾ ದರವನ್ನು ಕಡಿಮೆ ಮಾಡಿದ್ದು ಅವರ ಜೇಬಿಗೆ ಹಣ ಬರುತ್ತಿದ್ದಂತೆ ದರ ಹೆಚ್ಚಿಸುವ ಮೂಲಕ ಸುಲಿಗೆ ಮಾಡಲು ಮುಂದಾಗಿದ್ದಾರೆ ಎಂದು ಬಿಜ್ವಾ ಆರೋಪಿಸಿದ್ದಾರೆ.