ರಾಂಚಿ, ಡಿ 02, (DaijiworldNews/SM): ದೇಶದೆಲ್ಲೆಡೆ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗಿದೆ. ಅವರನ್ನು ದೇಶದಿಂದ ಹೊರ ಕಳುಹಿಸುವ ಪ್ರಯತ್ನ ಪ್ರಗತಿಯಲ್ಲಿದ್ದು, ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ಅನುಷ್ಠಾನಗೊಳಿಸುತ್ತೇವೆ. ಹಾಗೂ ಆ ಮೂಲಕ 2024 ಲೋಕಸಭಾ ಚುನಾವಣೆಗೂ ಮುನ್ನ ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶದಾದ್ಯಂತ ಜಾರಿಗೆ ತರುತ್ತೇವೆ, ಅಕ್ರಮ ವಲಸಿಗರನ್ನು ಗುರುತಿಸಿ, ಅವರನ್ನು ದೇಶದಿಂದ ಹೊರ ಕಳುಹಿಸುವ ಕಾರ್ಯ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿರುದ್ಧ ಕೂಡ ಅವರು ಗುಡುಗಿದರು. ಅಕ್ರಮ ವಲಸಿಗರಲ್ಲಿ ರಾಹುಲ್ ಗಾಂಧಿ ಸಂಬಂಧಿಗಳಿರಬಹುದು ಎಂದು ಆಕ್ರೋಶ ವ್ಯಕ್ತಪಡಿಸಿದರು.