ಬೆಂಗಳೂರು, ಡಿ 2 (DaijiworldNews/SM): ರಾಜ್ಯದಲ್ಲಿ ಉಪ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿದೆ. ಈ ನಡುವೆ ಸಿಎಂ ಯಡಿಯೂರಪ್ಪ ನೀತಿ ಸಂಹಿತೆ ಉಲ್ಲಂಘಿಸಿದ್ದಾಎ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ದೂರು ದಾಖಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ವೀರಶೈವ ಲಿಂಗಾಯತ ಸಮುದಾಯದ ಮತದಾರರ ಒಂದೇ ಒಂದು ಮತವೂ ಬಿಜೆಪಿ ಬಿಟ್ಟು ಆ ಕಡೆ ಈ ಕಡೆ ಹೋಗುವಂತಿಲ್ಲ ಎಂದು ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪ ಸಿಎಂ ಎದುರಿಸುತ್ತಿದ್ದರು. ಈ ಹಿನ್ನೆಲೆ ಅವರ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
ಅವರು ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀರಶೈವ ಸಮುದಾಯದ ಮತದಾರರಿಗೆ ಆಮಿಷ ಒಡ್ಡಿದ ಆರೋಪ ಎದುರಿಸುತ್ತಿದ್ದಾರೆ. ಈ ಆರೋಪ ಸಂಬಂಧ ದೂರು ಬಂದಿದೆ. ಸಿಎಂ ವಿರುದ್ಧ ದೂರು ಸ್ವೀಕರಿಸಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆ ಹಿನ್ನೆಲೆಯಲ್ಲಿ ಡಿಸೆಂಬರ್ ೩ರಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.