ಲಕ್ನೋ, ಡಿ 03 (Daijiworld News/MSP): ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದೂ, ಉತ್ತರ ಪ್ರದೇಶದ ಸೋನ್ ಭದ್ರಾ ಜಿಲ್ಲೆಯ ಅನ್ಪರಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ, 70 ವರ್ಷದ ವೃದ್ಧೆಯನ್ನು ಅತ್ಯಾಚಾರವೆಸಗಿದ ಯುವಕನನ್ನು ಪೊಲೀಸರ ಬಂಧಿಸಿದ್ದಾನೆ.
ಡಿ.1 ರಂದು ಪ್ರಕರಣದ ಆರೋಪಿ ರಾಮ್ ಕಿಶನ್ ನನ್ನು ಪೊಲೀಸರು ಬಂಧಿಸಿದ್ದು, ಸಂತ್ರಸ್ಥೆ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದು, "ಬಿಜೆಪಿ ಆಡಳಿತದ ರಾಜ್ಯದಲ್ಲಿ ಮಹಿಳೆಯರಿಗೆ ಮತ್ತು ರಕ್ಷಣೆಯಿಲ್ಲ ಮಹಿಳೆಯರ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಪ್ರತಿದಿನವೂ ಅತ್ಯಾಚಾರದ ಘಟನೆಗಳು ನಡೆಯುತ್ತಿವೆ. ಬೇಟಿ ಬಚಾವೊ ಬೇಟಿ ಪಡವೊ ಪ್ರಚಾರಕರು "ಅಮಾನವೀಯ ಘಟನೆಗಳನ್ನು" ಪರಿಶೀಲಿಸುವಲ್ಲಿ ವಿಫಲರಾಗಿದ್ದಾರೆ. ಪುಟ್ಟ ಹೆಣ್ಣು ಮಕ್ಕಳು ಕ್ರೌರ್ಯಕ್ಕೆ ಬಲಿಯಾಗುತ್ತಿದ್ದಾರೆ " ಎಂದು ಆರೋಪಿಸಿದರು.
ಹೈದರಾಬಾದ್ನಲ್ಲಿ ಪಶುವೈದ್ಯೆ ಮೇಲೆ ಕ್ರೂರ ಅತ್ಯಾಚಾರ ಮತ್ತು ಹತ್ಯೆಯ ಕೆಲವು ದಿನಗಳ ನಂತರ ಈ ಘಟನೆ ನಡೆದಿದ್ದು, ಇದರ ನಂತರ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿದ್ದು, ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಮತ್ತು ಮಹಿಳೆಯರ ಸುರಕ್ಷತೆಗಾಗಿ ಕಠಿಣ ಕಾನೂನುಗಳನ್ನು ಕೋರಿ ನಾಗರಿಕರು ಒತ್ತಾಯಿಸಿದ್ದಾರೆ.