ಬೆಂಗಳೂರು, ಡಿ 3(daijiworld News/MB) : 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆ ಬಳಿಕ ಬಿಜೆಪಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ನ ಶಾಸಕರು ಸೇರ್ಪಡೆಯಾಗಲಿದ್ದು ಆಪಟ್ಟಿಯನ್ನು ಫಲಿತಾಂಶದ ದಿನ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತಾನಾಡಿದ ಅವರು ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯವಾಗಿದ್ದು 105 ಮತ್ತು ಓರ್ವ ಪಕ್ಷೇತರ ಶಾಸಕರ ಬೆಂಬಲ ಈಗಾಗಲೇ ಲಭಿಸಿದೆ. ಏಕ ಪಕ್ಷದ ಸುಭದ್ರ ಸರಕಾರ ಡಿಸೆಂಬರ್ 9ರ ಬಳಿಕ ರಚನೆಗೊಳ್ಳಲಿದೆ. ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸುವ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಆದಂತೆ ಇಲ್ಲಿಯೂ ಸರಕಾರ ಉರುಳಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರಕಾರ ರಚನೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು ಜೆಡಿಎಸ್ ವರಿಷ್ಠರು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.