ನವದೆಹಲಿ, ಡಿ 3 (Daijiworld News/MB) : ಭಾರತದ ಹೂಡಿಕೆಗೆ ಇನ್ನಷ್ಟು ಪೂರಕ ವಾತಾವರಣ ನಿರ್ಮಿಸಲು ಸರಕಾರ ಬದ್ಧವಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ-ಸ್ವೀಡನ್ ವಾಣಿಜ್ಯ ಶೃಂಗ ಸಭೆಯಲ್ಲಿ ಮಾತಾನಾಡಿದ ಅವರು, ಹೂಡಿಕೆದಾರರಿಗೆ ಸಹಕಾರವಾಘುವಂತ ಎಲ್ಲಾ ಕಾನೂನು ಕ್ರಮವನ್ನು ಭಾರತ ತೆಗೆದುಕೊಳ್ಳಲಿದೆ ಮತ್ತು ನಮ್ಮ ದೇಶದಲ್ಲಿ ಹೂಡಿಕೆ ಮಾಡುವುದಕ್ಕೆ ಎಲ್ಲರನ್ನೂ ಆಹ್ವಾನಿಸುವ ಕೆಲಸವನ್ನು ನಾನು ಮಾಡಬಲ್ಲೆ ಎಂದು ತಿಳಿಸಿದ್ದಾರೆ.
ಬ್ಯಾಂಕಿಂಗ್ ಇರಬಹುದು ಅಥವಾ ಇನ್ಶೂರೆನ್ಸ್ ಇರಬಹುದು ಅಥವಾ ಮೈನಿಂಗ್ ಇರಬಹುದು ಯಾವುದೇ ಕ್ಷೇತ್ರದಲ್ಲಿ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲು ನಾನು ಬದ್ಧ ಹಾಗೂ ಆ ಭರವಸೆಯನ್ನು ನಾನು ನೀಡಬಲ್ಲೆ ಎಂದು ತಿಳಿಸಿದ್ದಾರೆ.
ಭಾರತವನ್ನು ಇನ್ನಷ್ಟು ಆಕರ್ಷಕ ತಾಣವನ್ನಾಗಿ ಮಾಡಲು ಕೇಂದ್ರ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಮುಕ್ತ ಮನಸ್ಸು ಮಾಡಿದೆ. ಮೂಲ ಸೌಕರ್ಯ ವಿಭಾಗದಲ್ಲಿ ಮುಂದಿನ ಐದು ವರ್ಷಗಳಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ ಎಂದರು.
ಇದಲ್ಲದೇ ಕಾರ್ಪೋರೇಟ್ ಟ್ಯಾಕ್ಸ್ ಹೊರೆ ಇಳಿಸುವ ನಿಟ್ಟಿನಲ್ಲಿ ಭಾರತ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ