ನವದೆಹಲಿ, ಡಿ 3 (Daijiworld News/MB) : ಮೈತ್ರಿ ಬಯಸುತ್ತಿರುವ ಕಾಂಗ್ರೆಸಿಗರ ಮಾಡು ಬಿಕ್ಷುಕರಂತಾಗಿದೆ. ಕಾಂಗ್ರೆಸಿಗರು ಬಿಕ್ಷುಕರ ರೀತಿಯಲ್ಲಿಯೇ ವರ್ತನೆ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ವ್ಯಂಗ್ಯ ಮಾಡಿದರು.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತಾನಾಡಿದ ಅವರು ಕಾಂಗ್ರೆಸ್ ಜೆಡಿಎಸ್ನವರು ಸೋಲು ಉಪಚುನಾವಣೆಗೂ ಮುನ್ನ ಸೋಲು ಒಪ್ಪಿಕೊಂಡಿರುವುದು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೆ ಇರುವುದರಿಂದ ಸ್ಪಷ್ಟವಾಗಿದೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದಾರೆ. ಆದರೆ ರಾಜ್ಯಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಹಾಗಾಗಿ ನಾವು ಈಗಲೇ ಸಿಹಿ ಸುದ್ದಿ ನೀಡಿದ್ದೇವೆ ಎಂದು ಹೇಳಿದರು.
ಅವರಿಗೆ ಜನತೆ ಮೇಲೆ ನಂಬಿಕೆ ಇದ್ದು ಉಪಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸುವ ವಿಶ್ವಾಸ ಇದಿದ್ದರೆ ಚುನಾವಣೆಗೆ ನಾಮಪತ್ರ ಸಲ್ಲಿಸಬಹುದಿತ್ತು. ಆದರೆ ನಾಮಪತ್ರ ಸಲ್ಲಿಸದೇ ಯುದ್ಧಕ್ಕೂ ಮುನ್ನ ಶಸ್ತ್ರ ತ್ಯಾಗ ಮಾಡಿದ್ದಾರೆ. ಒಂದು ಕಡೆ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಯಾವುದೇ ಮೈತ್ರಿ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ ಆದರೆ ಕಾಂಗ್ರೆಸ್ ಮಾತ್ರ ಮೈತ್ರಿ ಮಾಡಲು ಬಯಸಿ ತಾವಾಗಿಯೇ ನಿಂದನೆಗೆ ಒಳಪಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಮತ್ತು ಜೆಡಿಎಸ್ನ ಸಂಖ್ಯಾಬಲ 101 ಇದೆ ಎನ್ನುತ್ತಾರೆ. ಮುಂಬರುವ ಉಪಚುನಾವಣೆಯಲ್ಲಿ 12 ಸ್ಥಾನ ಗೆದ್ದರೂ ಕೂಡಾ ಬಹುಮತದ ಮ್ಯಾಜಿಕ್ ಸಂಖ್ಯೆ ಸಿಗಲಿದೆ. ಅದರ ಆಧಾರದ ಮೇಲೆ ರಾಜ್ಯಸಭಾ ಸ್ಥಾನವನ್ನೂ ಗೆಲ್ಲುವ ಅವಕಾಶವಿತ್ತು. ಆದರೆ ಅವರು ನಾಮಪತ್ರವೇ ಸಲ್ಲಿಸಿಲ್ಲ. ರಾಜ್ಯಸಭಾ ಚುನಾವಣೆಯು ಉಪಚುನಾವಣೆಗೆ ಪ್ರಾಥಮಿಕವಾದ ಪರೀಕ್ಷೆಯಂತಿತ್ತು. ಇದರಿಂದಲೇ ಕಾಂಗ್ರೆಸ್ ಮತ್ತು ಜೆಡಿಎಸ್ ವಿಫಲವಾಗಿದ್ದಾರೆ. ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಕೆ.ಸಿ.ರಾಮಮೂರ್ತಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.