ಬೆಂಗಳೂರು, ಡಿ 4 (Daijiworld News/MSP): 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕವಿ, ಅಂಕಣಕಾರ ವಿಮರ್ಶಕ ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಪತ್ರಿಕಾಗೋಷ್ಟಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನುಬಳಿಗಾರ್ ಹೆಚ್.ಎಸ್. ವೆಂಕಟೇಶ ಮೂರ್ತಿ ಹೆಸರು ಅಂತಿಮಗೊಳಿಸಲಾಗಿದೆ ಎಂದು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಾಹಿತ್ಯ ಸೇವೆ ಸಲ್ಲಿಸಿದ ಅನೇಕರ ಹೆಸರು ಚರ್ಚೆಗೆ ಬಂದರೂ ಕ.ಸಾ.ಪ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದಿಂದ ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆಯಾಗಿದ್ದಾರೆ ಎಂದು ಮನುಬಳಿಗಾರ್ ತಿಳಿಸಿದ್ದಾರೆ.
ಇನ್ನು ಕಲಬುರ್ಗಿಯಲ್ಲಿ 32 ವರುಷಗಳ ನಂತರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಗುಲ್ಬರ್ಗ ವಿಶ್ವವಿದ್ಯಾಲಯದ ಜ್ಞಾನಗಂಗೆ ಕ್ಯಾಂಪಸ್ನಲ್ಲಿ ಸಮ್ಮೇಳನ ನಡೆಸುವ ನಿರ್ಣಯವಾಗಿದ್ದು ಸಿದ್ಧತೆಗಳು ನಡೆಯುತ್ತಿದೆ.