ನವದೆಹಲಿ, ಡಿ 4 (Daijiworld News/ MB) : ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದಿಂದ ಬರುವ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟದಲ್ಲಿ ಅನುಮೋದನೆಯಾಗಿದೆ.
ಈ ಕುರಿತು ಕೇಂದ್ರ ಸರಕಾರವು ಈ ಮೂರು ದೇಶಗಳಲ್ಲಿ ಹಿಂದೂಗಳು, ಸಿಖ್, ಜೈನರು, ಬೌದ್ಧರು, ಪಾರ್ಸಿ ಹಾಗೂ ಕ್ರಿಶ್ಚಿಯನ್ ಸಮುದಾಯ ಅಲ್ಪಸಂಖ್ಯಾತ ಸಮುದಾಯವಾಗಿದ್ದು ಇವರಿಗೆ ಕಿರುಕುಳ ನೀಡಲಾಗುತ್ತಿದೆ. ಆ ಹಿನ್ನಲೆಯಲ್ಲಿ ಇವರಿಗೆ ಭಾರತದ ಪೌರತ್ವ ನೀಡುವ ಅವಶ್ಯಕತೆ ಇದೆ ಎಂದು ತಿಳಿಸಿದೆ.
ಮುಸ್ಲಿಮರನ್ನು ಮಾತ್ರ ಹೊರಗಡೆ ಇಟ್ಟಿರುವುದು ಸಂವಿಧಾನ ವಿರೋಧಿ ಧೋರಣೆಯಾಗಿದ್ದು ಇದು ಸರಿಯಲ್ಲ ಎಂದು ವಿಪಕ್ಷಗಳು ಪ್ರತಿಕ್ರಿಯೆ ನೀಡಿದೆ.
ಈ ಮೊದಲು ಭಾರತದ ಪೌರತ್ವ ಪಡೆಯಬೇಕಾದರೆ ಭಾರತದಲ್ಲಿ 12 ವರ್ಷಕ್ಕಿಂತ ಹೆಚ್ಚು ಕಾಲ ನೆಲೆಸಿರಬೇಕಾಗಿತ್ತು. ಆದರೆ ಈ ಮಸೂದೆಯಲ್ಲಿನ ತಿದ್ದುಪಡಿ ಪ್ರಕಾರ ಇನ್ನೂ ಮುಂದೆ ಭಾರತದ ಪೌರತ್ವ ಪಡೆಯಬೇಕಾದರೆ ಭಾರತದಲ್ಲಿ ೬ ವರ್ಷ ನಲೆಸಿದ್ದರೆ ಸಾಕು ಹಾಗೂ ಯಾವುದೇ ಸೂಕ್ತ ದಾಖಲೆಯ ಅಗತ್ಯತೆಯೂ ಇಲ್ಲ.
ಮೊದಲ ಬಾರಿಗೆ ಈ ಮಸೂದೆ 2016ರಲ್ಲಿ ಲೋಕಸಭೆಯಲ್ಲಿ ಮಂಡನೆಯಾಗಿದ್ದು ಈ ವೇಳೆ ತೀವ್ರ ವಿರೋಧ ವ್ಯಕ್ತವಾಗಿದ್ದು ಜಂಟಿ ಸಂಸದೀಯ ಸಮಿತಿ ಪರಾಮರ್ಶೆಗೆ ಹೋಗಿತ್ತು. ಈ ವರ್ಷದ ಜನವರಿಯಲ್ಲಿ ಈ ಸಮಿತಿಯು ವರದಿ ನೀಡಿದ್ದು ನಂತರ ಮಸೂದೆ ಮಂಡನೆ ಮಾಡಲಾಗಿದೆ. ಈ ಮಸೂದೆಯು ಲೋಕಸಭೆಯಲ್ಲಿ ಅಂಗೀಕಾರವಾದರೂ ಕೂಡಾ ರಾಜ್ಯಸಭೆಯಲ್ಲಿ ಬಹುಮತ ಇಲ್ಲದ ಕಾರಣದಿಂದಾಗಿ ಮಸೂದೆ ಅಂಗೀಕಾರವಾಗಿರಲಿಲ್ಲ. ಈ ಸಂದರ್ಭದಲ್ಲಿ 16ನೇ ಲೋಕಸಭೆಯ ಅವಧಿ ಮುಕ್ತಾಯವಾಗಿದ್ದು ಈಗ ತಿದ್ದುಪಡಿ ಮಾಡಿ ಮಂದಿನ ಮಂಗಳವಾರ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗುತ್ತಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈಗಾಗಲೇ "ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವಷ್ಟೇ ಮಹತ್ವದ ಮಸೂದೆ ಇದಾಗಿದ್ದು ಸದನದಲ್ಲಿ ಎಲ್ಲಾ ಸಂಸದರು ಹಾಜರಿರಬೇಕು ಎಂದು ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ.
ಈ ಮಸೂದೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ಹಲವೆಡೆ ಪ್ರತಿಭಟನೆ ನಡೆಸಲಾಗಿದೆ. ಮಸೂದೆಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದು ಸಂವಿಧಾನ ವಿರೋಧಿ ಕ್ರಮ ಎಂದು ವಿಪಕ್ಷಗಳು ಆರೋಪ ಮಾಡಿದೆ. ಹಾಗೆಯೇ ಇನ್ನಷ್ಟು ವಲಸಿಗರಿಗೆ ಆಶ್ರಯ ನೀಡಲು ಸಾಧ್ಯವೇ ಇಲ್ಲ. ಈ ಬಿಲ್ನ್ನು ಕೇಂದ್ರ ಸರ್ಕಾರ ಈ ಕ್ಷಣವೇ ಹಿಂಪಡೆಯಬೇಕು ಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಮಾಡಲಾಗಿದ್ದು ಪ್ರತಿಭಟನೆಯ ವೇಳೆ ಅಮಿತ್ಶಾ, ಅಸ್ಸಾಂ ಮುಖ್ಯಮಂತ್ರಿ ಸಿಎಂ ಸರ್ವಾನಂದ ಸೋನಾವಲ್ ಪ್ರತಿಕೃತಿ ದಹಿಸಲಾಗಿದೆ.
ಈ ಮಸೂದೆಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದು ಸಂವಿಧಾನ ವಿರೋಧಿ ಕ್ರಮ ಎಂದು ವಿಪಕ್ಷಗಳು ಆರೋಪಿಸಿವೆ. ಈ ಮಧ್ಯೆ, ಅಸ್ಸಾಂನಲ್ಲಿ ವಿರೋಧ, ಪ್ರತಿಭಟನೆ ವ್ಯಕ್ತವಾಗಿದೆ. ಮತ್ತಷ್ಟು ವಲಸಿಗರಿಗೆ ಆಶ್ರ ನೀಡೋಕೆ ಸಾಧ್ಯವೇ ಇಲ್ಲ. ಕೇಂದ್ರ ಸರ್ಕಾರ ಈ ಕ್ಷಣವೇ ಬಿಲ್ ಹಿಂಪಡೆಯಬೇಕು ಎಂದು ಅಮಿತ್ಶಾ, ಸಿಎಂ ಸರ್ಬಾನಂದ ಸೋನಾವಲ್ ಪ್ರತಿಕೃತಿ ದಹಿಸಲಾಗಿದೆ.