ಹೈದರಾಬಾದ್, ಡಿ 06 (Daijiworld News/MB): ಹೈದರಾಬಾದ್ 26 ವರ್ಷದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯ ಮೇಲೆ ಅತ್ಯಾಚಾರ ಮಾಡಿ ಬೆಂಕಿ ಹಾಕಿ ಸುಟ್ಟ ನಾಲ್ವರು ಆರೋಪಿಗಳು ಪೊಲೀಸರು ಎನ್ಕೌಂಟರ್ ಮಾಡಿದ್ದು ಆರೋಪಿಗಳು ಸಾವನ್ನಪ್ಪಿದ್ದಾರೆ.
ಈ ಘಟನೆ ನ್ಯಾಷನಲ್ ಹೈವೇ 44ರಲ್ಲಿ ಶುಕ್ರವಾರ ಬೆಳಗ್ಗಿನ ಜಾವ 3.30 ಗಂಟೆಗೆ ನಡೆದಿದೆ.
ಆರೋಪಿಗಳನ್ನು ಪೊಲೀಸರು ಅತ್ಯಾಚಾರ ಹಾಗೂ ಹತ್ಯೆ ನಡೆದ ಸ್ಥಳಕ್ಕೆ ಮಹಜರಿಗೆ ಕರೆದೋಯ್ದಿದ್ದ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದು ಅರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
26 ವರ್ಷದ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಆರಿಫ್, ಮೂವರು ಕ್ಲೀನರ್ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳನ್ನು14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಅವರನ್ನು ಹೈದರಾಬಾದ್ ನ ಚೆರ್ಲಪಳ್ಳಿ ಜೈಲಿಗೆ ವರ್ಗಾಹಿಸಲಾಗಿತ್ತು.