ನವದೆಹಲಿ, ಡಿ 06 (Daijiworld News/MB) : ಇಂದಿಗೆ ಅಯೋಧ್ಯೆ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ 27 ವರ್ಷವಾಗಿದ್ದು ಹಾಗಾಗಿ ಯಾವುದೇ ಅವಘಡ ಸಂಭವಿಸದಂತೆ ದೇಶಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಅಯೋಧ್ಯೆಯಲ್ಲಿ ಸಾವಿರಾರು ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ ಹಾಗೂ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರಕಾರ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಿಗಾವಹಿಸಬೇಕು ಎಂದು ಆದೇಶ ಹೊರಡಿಸಿದ್ದು ಈ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಈಗಾಗಲೇ ಸುಪ್ರೀಂಕೋರ್ಟ್ ಅಯೋಧ್ಯೆ ಬಾಬರಿ ಮಸೀದಿ-ರಾಮ ಜನ್ಮಭೂಮಿ ವಿವಾದ ಕುರಿತಂತೆ ತೀರ್ಪು ನೀಡಿದ್ದು ವಿವಾದಿತ 2.77 ಎಕರೆ ಜಾಗವನ್ನು ರಾಮಲಲ್ಲ ವಶಕ್ಕೆ ನೀಡುವಂತೆ ಆದೇಶಿಸಿತ್ತು.