ನವದೆಹಲಿ, ಡಿ 06 (Daijiworld News/MB) : "ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ ವಿಷಯ ಕೇಳಿ ಸಂತೋಷವಾಗಿದೆ. ನನ್ನ ಮಗಳನ್ನು ಅತ್ಯಾಚಾರ ಮಾಡಿದ ಆರೋಪಿಗಳಿಗೆ ಶೀಘ್ರದಲ್ಲೇ ಗಲ್ಲು ಶಿಕ್ಷೆ ವಿಧಿಸಿ" ಎಂದು ನಿರ್ಭಯಾ ತಾಯಿ ಆಶಾ ದೇವಿ ಆಗ್ರಹಿಸಿದ್ದಾರೆ.
ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಆರೋಪಿಗಳನ್ನು ಇಂದು ಬೆಳಿಗ್ಗೆ ಮಹಜರಿಗಾಗಿ ಕರೆದೊಯ್ಯುದಿದ್ದು ಪರಾರಿಯಾಗಲು ಯತ್ನಿಸಿದಾಗ ಎನ್ಕೌಂಟರ್ ಮಾಡಲಾಗಿದೆ.
ಈ ಹಿನ್ನಲೆಯಲ್ಲಿ ಮಾತಾನಾಡಿದ ನಿರ್ಭಯಾ ತಾಯಿ ಆಶಾ ದೇವಿ, "ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಕಾಮುಕರಿಗೆ ಸಿಕ್ಇರುವ ಶಿಕ್ಷೆಯಿಂದ ನನಗೆ ಬಹಳ ಸಂತೋಷವಾಗಿದೆ. ಪೊಲೀಸರು ಉತ್ತಮ ಕಾರ್ಯವನ್ನು ನಿರ್ವಹಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿ ಪೊಲೀಸ್ ಸಿಬ್ಬಂದಗಳ ವಿರುದ್ಧ ಯಾವುದೇ ರೀತಿಯ ಕ್ರಮಕೈಗೊಳ್ಳಬಾರದು" ಎಂದು ಮನವಿ ಮಾಡಿದರು.
"ನನ್ನ ಮಗಳ ಮೇಲೆ ನಡೆದ ಅತ್ಯಾಚಾರ ವಿಷಯಕ್ಕೆ ಸಂಬಂಧಿಸಿ ಕಳೆದ 7 ವರ್ಷಗಳಿಂದ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದೇನೆ. ನನ್ನ ಮಗಳ ಅತ್ಯಾಚಾರ ಮಾಡಿದ ಆರೋಪಿಗಳಿಗೂ ಶೀಘ್ರದಲ್ಲೆ ಗಲ್ಲು ಶಿಕ್ಷೆ ನೀಡುವಂತೆ ಈ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆಗೆ ಮನವಿ ಮಾಡಿಕೊಳ್ಳುತ್ತೇನೆ" ಎಂದು ಹೇಳಿದ್ದಾರೆ.