ಬೆಂಗಳೂರು ಡಿ 09(Daijiworld News/MSP):ರಾಜ್ಯದಲ್ಲಿ 5 ತಿಂಗಳ ಹಿಂದೆ ನಡೆದ ರಾಜಕೀಯ ಪ್ರಹಸನದ ಆ ಬಳಿಕ ರಚನೆಯಾದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧಾರವಾಗಲಿರುವ ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ಹನ್ನೊಂದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೂ, ಪ್ರತಿಷ್ಟಿತ ಕಣ ಎಂದೇ ಹೆಸರಾಗಿರುವ ಹುಣಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಹಳ್ಳಿಹಕ್ಕಿ ಎಚ್. ವಿಶ್ವನಾಥ್ಗೆ ಮತದಾರರು ಬಿಸಿ ಮುಟ್ಟಿಸಿದ್ದು ಆರಂಭದಿಂದಲೇ ವಿಶ್ವನಾಥ್ ತೀವ್ರ ಹಿನ್ನಡೆ ಅನುಭವಿಸಿದ್ದಾರೆ.
ಹುಣಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ 7633 ಮತಗಳ ಮುನ್ನಡೆ ಸಾಧಿಸಿದ್ದು, ಹಳ್ಳಿಹಕ್ಕಿ, ಬಿಜೆಪಿ ಅಭ್ಯರ್ಥಿ ವಿಶ್ವನಾಥ್ 11 ಸಾವಿರ ಮತಗಳ ಅಂತರದಿಂದ ಹಿನ್ನಡೆ ಅನುಭವಿಸುವ ಮೂಲಕ ಸೋಲಿನತ್ತ ಹೆಜ್ಜೆಇಟ್ಟಿದ್ದಾರೆ.
ಮತ್ತೊಂದೆಡೆ ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಮುನ್ನಡೆ ಸಾಧಿಸಿದ್ದು, ಬಿಜೆಪಿಯ ಎಂಟಿಬಿ ನಾಗರಾಜ್ ಹಿನ್ನಡೆ ಅನುಭವಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂಟಿಬಿ ವಿರುದ್ಧ ಶರದ್ ಬಚ್ಚೇಗೌಡ ಕೇವಲ ಮೂರು ಮತಗಳ ಅಂತರದಿಂದ ಸೋತಿದ್ದರು.