ಬೆಂಗಳೂರು, ಡಿ 09 (DaijiworldNews/SM): ಉಪಚುನಾವಣೆ ಫಲಿತಾಂಶದ ಬಳಿಕ ನಟ ಪ್ರಕಾಶ್ ರೈ ಪ್ರತಿಕ್ರಿಯೆ ನೀಡಿದ್ದು, ಬೆನ್ನಿಗೆ ಚೂರಿ ಹಾಕಿದವರು ಮತ್ತೆ ಅಧಿಕಾರಕ್ಕೆ ಬಂದರು. ಆದರೆ ಇದು ಹೆಚ್ಚು ದಿನ ನಡೆಯುವುದಿಲ್ಲ ಎಂದಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಅನರ್ಹ ಶಾಸಕರಿಗೆ ರಾಜ್ಯದ ಜನತೆ ಮಣೆ ಹಾಕಿದ್ದಾರೆ. ಮಾಡಿದುಣ್ಣೋ ಮಾರಾಯ ಎನ್ನುವ ಸ್ಥಿತಿ ಬರುತ್ತದೆ ಎಂದು ನಟ ಪ್ರಕಾಶ್ ರಾಜ್ ಟೀಕಿಸಿದ್ದಾರೆ. ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಅದರಲ್ಲಿ ಬಿಜೆಪಿ ಪಕ್ಷ 12 ಸ್ಥಾನಗಳಲ್ಲಿ ಜಯಗಳಿಸಿದೆ.