ನವದೆಹಲಿ, ಡಿ 11 (Daijiworld News/MB) : ತೀವ್ರ ವಿರೋಧದ ಬೆನ್ನಲ್ಲೂ ಲೋಕ ಸಭೆಯಲ್ಲಿ ಅಂಗೀಕಾರಗೊಂಡಿರುವ ಪೌರತ್ವ ತಿದ್ದುಪಡಿ ಮಸೂದೆ ಬುಧವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದ್ದು ಮಸೂದೆ ಅಂಗೀಕಾರವಾಗುವ ಸಾಧ್ಯತೆ ಹೆಚ್ಚಾಗಿದೆ.
ಸೋಮವಾರ ಲೋಕಸಭೆಯಲ್ಲಿ 311 ಸದಸ್ಯರು ಮಸೂದೆಯ ಪರವಾಗಿ ಹಾಗೂ 80 ಸದಸ್ಯರು ಮಸೂದೆಯ ವಿರುದ್ಧವಾಗಿ ಮತ ಚಲಾವಣೆ ಮಾಡಿದ್ದು 7 ಗಂಟೆಗಳ ಕಾಲ ಸುದೀರ್ಘವಾದ ಚರ್ಚೆ ನಡೆದ ಬಳಿಕ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿತ್ತು.
ಇಂದು 245 ಜನರ ಸದಸ್ಯ ಬಲವಿರುವ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರಕ್ಕೆ ಕನಿಷ್ಠ 123 ಸಂಸದರ ಬೆಂಬಲದ ಅಗತ್ಯವಿದೆ.