ನವದೆಹಲಿ, ಡಿ 12 (Daijiworld News/MB) : ಕರ್ನಾಟಕದ ಉಪಚುನಾವಣೆಯಲ್ಲಿ ಗೆದ್ದ ಬಿಜೆಪಿ ತನ್ನ ಆಡಳಿತವನ್ನು ಉಳಿಸಿಕೊಂಡಿದ್ದು ಸಿಹಿ ತಿಂದು ವಿಜಯೋತ್ಸವ ಆಚರಣೆ ಮಾಡಿದೆ.
ಕರ್ನಾಟಕ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಇಂದು ದೆಹಲಿಯಲ್ಲಿ ಭೇಟಿಯಾಗಿ ಸಿಹಿ ನೀಡಿದ್ದಾರೆ.
ಅನರ್ಹ ಶಾಸಕರಿಂದ ತೆರವುಗೊಂಡಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿದ್ದು ಈ ಪೈಕಿ 12 ಸ್ಥಾನಗಳಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಹೈಕಮಾಂಡ್ ಸಿಹಿ ತಿಂದು ಸಂತೋಷವನ್ನು ಹಂಚಿಕೊಂಡಿದ್ದಾರೆ.
ಅಷ್ಟು ಮಾತ್ರವಲ್ಲದೇ ಕರ್ನಾಟಕದಲ್ಲಿ ಬಿಜೆಪಿ ಸರಕಾರ ಉಳಿಸುವ ನೇತೃತ್ವ ಹೊತ್ತ ಯಡಿಯೂರಪ್ಪ ಅವರಿಗೆ ಉಪಚುನಾವಣೆಯ ನಂತರ ಬಿಜೆಪಿ ಸರಕಾರ ಉಳಿದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಸ್ಟ್ಯಾಂಡಿಂಗ್ ಅವೇಷನ್ ನೀಡಲಾಗಿದೆ.
ಈ ಸಂದರ್ಭದಲ್ಲಿ ಬಿಎಸ್ವೈ ಪುತ್ರ , ಶಿವಮೊಗ್ಗ ಸಂಸದ ರಾಘವೇಂದ್ರ, ಮೈಸೂರು ಸಂಸದ ಪ್ರತಾಪ್ ಸಿಂಹ, ತುಮಕೂರು ಸಂಸದ ಜಿ ಎಸ್ ಬಸವರಾಜು ಉಪಸ್ಥಿತರಿದ್ದರು.