ನವದೆಹಲಿ, ಡಿ 12(Daijiworld News/MSP): ಐತಿಹಾಸಿಕ ಅಯೋಧ್ಯೆ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ 18 ಅರ್ಜಿಗಳನ್ನು ಸುಪ್ರೀಂಕೋರ್ಟ್ ಪಂಚಸದಸ್ಯ ಪೀಠ ವಜಾಗೊಳಿಸಿದೆ.
ವಿವಾದಿತ ರಾಮಜನ್ಮ ಭೂಮಿ ರಾಮಲಲ್ಲಾಗೆ ನೀಡಿ, ಸುನ್ನಿ ವಕ್ಫ್ ಬೋರ್ಡ್ ಮಸೀದಿ ನಿರ್ಮಾಣಕ್ಕೆ ಬೇರೆಡೆ ಪ್ರತ್ಯೇಕ 5 ಎಕರೆ ಭೂಮಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ನ ಅಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ನೇತೃತ್ವದ ಪಂಚ ಪೀಠ ಐತಿಹಾಸಿಕ ತೀರ್ಪು ನೀಡಿತ್ತು.
ನಿರ್ಮೋಹಿ ಅಖಾಡ ಹಾಗೂ 5 ಎಕ್ರೆ ಜಮೀನು ನಿರಾಕರಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹಾಗೂ ಇತರ ಮರುಪರಿಶೀಲನೆ ಮಾಡಬೇಕು ಎಂದು ಪಿಐಎಲ್ ಸಲ್ಲಿಸಿದ್ದರು. ಈ ಸಂಬಂಧ ಇಂದು ವಿಚಾರಣೆ ನಡೆಸಿದ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಚಂದ್ರಚೂಡ್, ಅಶೋಕ್ ಭೂಷಣ್, ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಪಂಚ ಪೀಠ ಅರ್ಜಿಗಳನ್ನು ವಜಾಗೊಳಿಸಿದೆ. ಹೀಗಾಗಿ ಇದೀಗ ಈ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದ್ದು ಅಯೋಧ್ಯೆ ವಿವಾದ ಇಲ್ಲಿಗೆ ಸಮಾಪ್ತಿಯಾದಂತಾಗಿದೆ.