ನವದೆಹಲಿ, ಡಿ 14 (Daijiworld News/MB) : ಪೌರತ್ವ ತಿದ್ದುಪಡಿ ಮಸೂದೆಗೆ ಕೆಲವು ರಾಜ್ಯ ಸರಕಾರಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ತಮ್ಮ ರಾಜ್ಯದಲ್ಲಿ ಈ ಮಸೂದೆ ಜಾರಿ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧ ಮಾಡುವ ಹಕ್ಕು ರಾಜ್ಯ ಸರಕಾರಗಳಿಗೆ ಇಲ್ಲ ಎಂದು ಪ್ರತಿಕ್ರಿಯೆ ನೀಡಿದೆ.
"ಈ ಕಾನೂನನ್ನು ಜಾರಿ ಮಾಡಲು ರಾಜ್ಯ ಸರಕಾರಗಳು ಹಿಂದೆ ಸರಿಯುವಂತೆ ಇಲ್ಲ. ರಾಜ್ಯ ಸರಕಾರಗಳಿಗೆ ಅಂತಹ ಯಾವುದೇ ಅಧಿಕಾರಗಳು ಇಲ್ಲ" ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಹಾಗೆಯೇ ಈ ಕುರಿತು ಮಾತಾನಾಡಿರುವ ಸಂವಿಧಾನ ತಂಜ್ಞರು "ಕೇರಳ, ಪಶ್ಚಿಮ ಬಂಗಾಳ ಹಾಗೂ ಪಂಜಾಬ್ ಮುಖ್ಯಮಂತ್ರಿಗಳು ತೆಗೆದು ಕೊಂಡಿರುವ ನಿರ್ಧಾರಕ್ಕೆ ಕಾನೂನಾತ್ಮಕವಾಗಿ ಯಾವುದೇ ಮಾನ್ಯತೆ ಇಲ್ಲ" ಎಂದು ಹೇಳಿದ್ದಾರೆ.
ಈ ಕಾನೂನು ಸಮಾನತೆಯ ಅಧಿಕಾರಕ್ಕೆ ಧಕ್ಕೆ ಉಂಟು ಮಾಡುತ್ತದೆ ಎಂದು ಕಾಂಗ್ರಸ್ ಪಕ್ಷ, ಈ ವಿವಾದಿತ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.