ಮುಂಬೈ, ಡಿ 15 (Daijiworld News/MB) : ರಾಹುಲ್ ಗಾಂಧಿ ರೇಪ್ ಇನ್ ಇಂಡಿಯಾ ಹೇಳಿಕೆಗೆ ಕ್ಷಮೆ ಕೇಳುವಂತೆ ಬಿಜೆಪಿ ಒತ್ತಾಯಿಸಿದ್ದು ರಾಹುಲ್ ಗಾಂಧಿ "ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ" ಎಂದು ಹೇಳಿದ್ದು ಈಗ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ "ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ" ತಿಳಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭೇಟಿ ನಂತರ ಮಾತನಾಡಿದ ಅವರು, "ರಾಹುಲ್ ಗಾಂಧಿ ಈ ರೀತಿ ಹೇಳಿಕೆ ನೀಡಿರುವುದು ದುರದೃಷ್ಟಕರ. ಅವರು ಈ ರೀತಿಯ ಹೇಳಿಕೆಗಳನ್ನು ನೀಡುವುದನ್ನೇ ಅಭ್ಯಾಸ ಮಾಡಿಕೊಂಡಿದ್ದಾರೆ" ಎಂದು ಹೇಳಿದ್ದಾರೆ.
"ನಾವೆಂದಿಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುವುದಿಲ್ಲ. ಆದರೆ ಕಾಂಗ್ರೆಸ್ ಸಾವರ್ಕರ್ ಅವರಿಗೆ ಅವಮಾನ ಮಾಡುತ್ತಿದೆ. ಶಿವ ಸೇನೆ ಕಾಂಗ್ರೆಸ್ನ ಸಚಿವರನ್ನು ತೆಗೆದು ಹಾಕಬೇಕು" ಎಂದು ರಂಜಿತ್ ಒತ್ತಾಯಿಸಿದ್ದಾರೆ.
ಶನಿವಾರ ರಾಮಲೀಲಾ ಮೈದಾನದಲ್ಲಿ ನಡೆದ ಭಾರತ್ ಬಚಾವೋ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, "ನಾನು ರೇಪ್ ಇನ್ ಇಂಡಿಯಾ ಹೇಳಿಕೆಗೆ ಕ್ಷಮೆಯಾಚಿಸಲ್ಲ, ನಾನು ರಾಹುಲ್ ಸಾವರ್ಕರ್ ಅಲ್ಲ. ಸತ್ಯ ಹೇಳಿ ನಾನು ಎಂದಿಗೂ ಕ್ಷಮೆ ಕೇಳುವುದಿಲ್ಲ" ಎಂದು ಹೇಳಿ "ನಾನು, ಭಾರತದ ವಿವಿಧ ಬಾಗಗಳಲ್ಲಿ ನಿರಂತರವಾಗಿ ಅತ್ಯಾಚಾರ ಸುದ್ದಿಯಾಗುತ್ತಿದೆ. ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ನಡೆಯುತ್ತಿದೆ. ನಾವು ಮೇಕ್ ಇನ್ ಇಂಡಿಯಾ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಮಾತಾನಾಡಿದ್ದನ್ನು ನೋಡುತ್ತೇನೆ ಅಂದುಕೊಂಡಿದ್ದೆ, ಆದರೆ ದಿನ ಪತ್ರಿಕೆಗಳಲ್ಲಿ ರೇಪ್ ಇನ್ ಇಂಡಿಯಾ ಸುದ್ದಿಗಳೇ ಇವೆ ಎಂದು ಹೇಳಿದ್ದೆ" ಎಂದು ಸ್ಪಷ್ಟ ಪಡಿಸಿದ್ದರು.