ನವದೆಹಲಿ, ಡಿ 15 (Daijiworld News/MB) : ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪೌರತ್ವ ಕಾನೂನಿನ ಮೇಲೆ ಸುಳ್ಳು ದೋಷಾರೋಪ ಮಡುತ್ತಿದೆ, ಅಲ್ಲದೇ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿಷಯದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಜಾರ್ಖಂಡ್ನ ಡುಮ್ಕಾದಲ್ಲಿ ನಡೆದ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತಾನಾಡಿದ ಅವರು, "ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪೌರತ್ವ ಕಾಯ್ದೆಯ ಹೆಸರಲ್ಲಿ ದೇಶಕ್ಕೆ ಬೆಂಕಿ ಹಚ್ಚುತ್ತಿದೆ. ಆದರೆ ಈಶಾನ್ಯದ ಜನ ಹಿಂಸಾಚಾರವನ್ನು ತಿರಸ್ಕಾರ ಮಾಡಿದ್ದಾರೆ. ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ದೂರಿದರು.
ವಿರೋಧ ಪಕ್ಷಗಳ ನಾಯಕರು ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸದೆ ತಮಗಾಗಿ ಮಾತ್ರ ಅರಮನೆಗಳನ್ನು ನಿರ್ಮಿಸಿದ್ದಾರೆ ಎಂದು ದೂಷಸಿದ್ದಾರೆ.