ಕೊಲ್ಕತ್ತಾ, ಡಿ 16 (Daijiworld News/MB) : ಸಿಎಎ ಹಾಗೂ ಎನ್ಆರ್ಸಿ ವಿರುದ್ಧ ಕಾನೂನು ಕೈಗೆತ್ತಿಕೊಳ್ಳದೆ ಶಾಂತಯುತವಾದ ಬೃಹತ್ ರ್ಯಾಲಿಗೆ ಸೋಮವಾರ ಕರೆ ನೀಡಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ ಹಾಗೂ ಎನ್ಆರ್ಸಿ ವಿರೋಧಿಸಿ ಇಂದು ಮಧ್ಯಾಹ್ನ 1 ಗಂಟೆಗೆ ಬೃಹತ್ ರ್ಯಾಲಿ ನಡೆಯಲಿದ್ದು ರ್ಯಾಲಿ ರೆಡ್ ರೋಡ್ನಲ್ಲಿರುವ ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದಿಂದ ಜೋರಸಂಕೊ ತಾಕುರ್ಬಾರಿಯಲ್ಲಿ ಕೊನೆಗೊಳ್ಳಲಿದೆ ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
ಹಾಗೆಯೇ ಈ ರ್ಯಾಲಿಯಲ್ಲಿ ಶಾಂತಿಯುತವಾಗಿ ಪಾಲ್ಗೊಳ್ಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆಯ ಪ್ರಕಾರ ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದಿಂದ ಬರುವ ವಲಸಿಗರಿಗೆ ಭಾರತೀಯ ಪೌರತ್ವ ನೀಡಲಾಗುತ್ತದೆ. ಈ ಮೂರು ದೇಶಗಳಿಂದ ಬರುವ ಮುಸ್ಲಿಮರನ್ನು ಹೊರತುಪಡಿಸಿ ಹಿಂದೂಗಳು, ಸಿಖ್, ಜೈನರು, ಬೌದ್ಧರು, ಪಾರ್ಸಿ ಹಾಗೂ ಕ್ರಿಶ್ಚಿಯನ್ ಸಮುದಾಯದವರಿಗೆ ಭಾರತೀಯ ಪೌರತ್ವ ನೀಡಲಾಗುತ್ತದೆ.