ಮುಂಬೈ, ಡಿ 16 (Daijiworld News/PY) : ಶಾಲಾ ಶೌಚಾಲಯದಲ್ಲಿ ಏಳು ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಶಂಕಿಸಲಾಗಿದೆ.
ಶುಕ್ರವಾರದಂದು ಈ ಘಟನೆ ನಡೆದಿದ್ದು, ಶಾಲೆ ಅವಧಿಯಲ್ಲಿ ಶಾಲಾ ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ತಾಯಿ ಆರೋಪಿಸಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿರುವ ಮಲ್ವಾನಿ ಠಾಣೆಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
"ಮನೆಗೆ ಹಿಂದಿರುಗಿದ ನಂತರ, ಸಂತ್ರಸ್ತೆ ಬಾಲಕಿ ತನ್ನ ತಾಯಿಗೆ ಈ ಘಟನೆಯ ಬಗ್ಗೆ ತಿಳಿಸಿದ್ದು, ಈ ಹಿನ್ನಲೆಯಲ್ಲಿ ತಾಯಿ ತನ್ನ ಮಗಳನ್ನು ವೈದ್ಯರ ಬಳಿಗೆ ಕರೆದೊಯ್ದಾಗ ಬಾಲಕಿ ಮೇಲೆ ಲೈಂಗಿಕ ಹಲ್ಲೆ ನಡೆಸುವ ವೇಳೆ ಕ್ರೆಯೋನ್ಸ್ ಅಥವಾ ಪೆನ್ಸಿಲ್ ಬಳಸಿರಬಹುದು ಎಂದು ಶಂಕಿಸಿದ್ದಾರೆ" ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಶಾಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ವಶಪಡಿಸಿಕೊಳ್ಳಲಾಗಿದ್ದು ತನಿಖೆ ಮುಂದುವರಿಸಲಾಗಿದ್ದು ಪ್ರಕರಣದ ಕುರಿತು ಐಪಿಸಿ ಸೆಕ್ಷನ್ ೩೭೬ ಹಾಗೂ ಸೆಕ್ಷನ್ ೪ ಮತ್ತು ೮ ರ ಪ್ರಕಾರ ಕೇಸು ದಾಖಲಿಸಲಾಗಿದೆ.