ನವದೆಹಲಿ, ಡಿ 17 (Daijiworld News/MB) : ಬೆಂಗಳೂರು ಮಾಡ್ಯೂಲ್ ಪ್ರಕರಣದ ಪ್ರಮುಖ ಆರೋಪಿ ಜೆಎಂಬಿ (ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ) ಉಗ್ರ ಮೊಸರೂಫ್ ಹುಸೇನ್(22) ಅನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಈತ ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ರಘುನಾಥ್ ಗಂಜ್ ನಲ್ಲಿ ತಲೆಮರೆಸಿಕೊಂಡಿದ್ದ.
ಕೋಲ್ಕತ್ತಾ ಎನ್ಐಎ ವಿಶೇಷ ಕೋರ್ಟ್ ಗೆ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲು ಅನುಮತಿ ನೀಡುವಂತೆ ಬೆಂಗಳೂರಿನ ಎನ್ಐಎ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.