ಹೊಸದಿಲ್ಲಿ, ಡಿ 17 (Daijiworld News/PY) : ರಾಷ್ಟ್ರ ರಾಜಧಾನಿಯನ್ನು ಬೆಚ್ಚಿ ಬೀಳಿಸಿದ ನಿರ್ಭಯಾ ಅತ್ಯಾಚಾರದ ಪ್ರಕರಣಕ್ಕೆ ಸಂಬಂಧಪಟ್ಟ ಅತ್ಯಾಚಾರಿಗಳಲ್ಲಿ ಗಲ್ಲು ಶಿಕ್ಷೆಗೆ ಒಳಪಟ್ಟ ಅಕ್ಷಯ್ ಕುಮಾರ್ ಎಂಬಾತ ಸಲ್ಲಿಸಿದ ಮೇಲ್ಮನವಿಯ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.
ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಒಳಪಟ್ಟಿದ್ದ ಅಪರಾಧಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ವಿಚಾರಣೆ ನಡೆಸಬೇಕಾಗಿತ್ತು. ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಶರತ್ ಎ ಬೋಬ್ಡೆ ಅವರು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಕಾರಣ ವಿಚಾರಣೆ ನಾಳೆಗೆ ಮುಂದೂಡಲಾಯಿತು.
ಈ ಹಿಂದೆಯಷ್ಟೇ ಸುಪ್ರೀಂಕೋರ್ಟ್ ನೀಡಿದ್ದ ಗಲ್ಲು ಶಿಕ್ಷೆ ಆದೇಶವನ್ನು ಪುನರ್ ಪರಿಶೀಲನೆ ಮಾಡುವಂತೆ ಹಾಗೂ ಹಿಂದಿನ ಪ್ರಕರಣದಲ್ಲಿ ಬಾಕಿಯಾದ ಮೂವರು ಅಪರಾಧಿಗಳಾದ ಮುಖೇಶ್, ಪವನ್ ಕುಮಾರ್ ಗುಪ್ತಾ ಹಾಗೂ ವಿನಯ್ ಶರ್ಮಾ ನೀಡಿದ್ದ ಪುನರ್ ಪರಿಶೀಲನೆ ಅರ್ಜಿಯನ್ನು ಸುಪ್ರೀಂಕೋರ್ಟ್ ಇದಾಗಲೇ ವಜಾ ಮಾಡಿತ್ತು. ಅಲ್ಲದೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈಗಾಗಲೇ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದು ಇದರ ಬೆನ್ನಲ್ಲೇ ಅಕ್ಷಯ್ ಠಾಕೂರ್ ಸಲ್ಲಿಸಿದ ಕೊನೆಯ ಅರ್ಜಿ ಮಹತ್ವ ಪಡೆದುಕೊಂಡಿತ್ತು ಇದೀಗ ನಾಳೆಯ ಸುಪ್ರೀಂಕೋರ್ಟ್ನ ನಿರ್ಧಾರದತ್ತ ಎಲ್ಲರ ಗಮನ ಸೆಳೆಯಲಿದೆ.