ಮುಂಬೈ, ಡಿ 17 (Daijiworld News/PY) : ಪೌರತ್ವ ತಿದ್ದುಪಡಿ ಮಸೂದೆಯ ಬಗ್ಗೆ ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಮಾಡಿದ ಲಾಠಿ ಚಾರ್ಜ್ ನ್ನು ಬ್ರಿಟೀಷ್ ಆಡಳಿತ ಅವಧಿಯಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ನೀಡಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆಯ ಬಗ್ಗೆ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿದ ಲಾಠಿಚಾರ್ಜ್ ನ್ನು ಖಂಡಿಸಿ ಮಾತನಾಡಿದ ಉದ್ಧವ್ ಠಾಕ್ರೆ, "ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಕೈ ಕೊಂಡಿರುವ ಕ್ರಮವು 1919ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಘಟನೆಯನ್ನು ಮರುಕಳಿಸುವಂತೆ ಮಾಡಿತು. ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಈ ವೇಳೆ ಏನು ನಡೆಯುತ್ತಿದೆಯೋ ಅದೇ ರೀತಿ ಜಲಿಯನ್ ವಾಲಾಬಾಗ್ನಲ್ಲಿ ನಡೆದಿತ್ತು. ವಿದ್ಯಾರ್ಥಿಗಳು ಯುವ ಬಾಂಬ್ ಇದ್ದಂತೆ. ಹೀಗಾಗಿ ಈ ರೀತಿಯ ಕ್ರಮ ಸರಿಯಲ್ಲ ಎಂದು ಕೇಂದ್ರ ಸರ್ಕಾರಕ್ಕೆ ನಾವು ಮನವಿ ಮಾಡುತ್ತಿದ್ದೇವೆ ಎಂದರು.
ಇನ್ನೊಂದೆಡೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕರದ ವಿರುದ್ದ ಹರಿಹಾಯ್ದಿದ್ದು, ಜಾಮಿಯಾ ವಿವಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿದೆ. ಕೇಂದ್ರ ಸರ್ಕಾರವೂ, ಸಂವಿಧಾನ ಮತ್ತು ವಿದ್ಯಾರ್ಥಿಗಳ ಮೇಲೆಯೂ ದಾಳಿ ನಡೆಸಿದೆ. ನಾವು ಸಂವಿಧಾನದ ಉಳಿವಿಗಾಗಿ ಹೋರಾಡುತ್ತೇವೆ. ನಾವು ಸರ್ಕಾರದ ವಿರುದ್ಧ ಹೋರಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.