ನವದೆಹಲಿ, ಡಿ 18 (Daijiworld News/PY) : ನೂತನವಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿಯ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿರುವ ಬೆನ್ನಲ್ಲೇ ಶಾಹಿ ಇಮಾಮ್ ಹೇಳಿರುವ ಹೇಳಿಕೆ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿದೆ.
ಪ್ರಜಾತಂತ್ರದ ವ್ಯವಸ್ಥೆಯಲ್ಲಿ ಪ್ರತಿಭಟಿಸುವುದು ನಮ್ಮ ಹಕ್ಕು. ಆದರೆ ಹೊಸದಾಗಿ ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆಯಿಂದಾಗಿ "ಭಾರತದಲ್ಲಿ ನೆಲೆಸಿರುವ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆಗಳು ಎದುರಾಗುವುದಿಲ್ಲ" ಎಂದು ದಿಲ್ಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.