ಶಿವಮೊಗ್ಗ, ಡಿ 18 (Daijiworld News/PY) : "ಹೊಸದಾಗಿ ಜಾರಿಗೆ ಬಂದಿರುವ ಪೌರತ್ವ ಕಾಯ್ದೆಯ ವಿಚಾರದಲ್ಲಿ ಕಾಂಗ್ರೇಸ್ ಜನರನ್ನು ದಾರಿ ತಪ್ಪಿಸುವ ಕಾರ್ಯವನ್ನು ಮಾಡುತ್ತಿದೆ" ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇದೇ ವೇಳೆ ರಾಹುಲ್ ಗಾಂಧಿಯವರ ಬಗ್ಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ "ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಅವರ ಮೂಲ ಪಾಕಿಸ್ತಾನವಾಗಿದ್ದು, ಅವರು ಪಾಕ್ ನ ಏಜೆಂಟ್ ಆಗಿದ್ದಾರೆ" ಎಂದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ವಿಜಯಪುರದಲ್ಲಿ ಮಾತನಾಡಿದ ಅವರು, "ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಲ್ಲಿ ಹಿಂದೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ, ಅಂತಹವರಿಗೆ ಆಶ್ರಯ ನೀಡಲು ಪ್ರಧಾನಿಗಳು, ಗೃಹ ಸಚಿವ ಅಮಿತ್ ಶಾ ಚಿಂತನೆ ನಡೆಸಿದ್ದಾರೆ" ಎಂದರು.
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, "ಕಾಂಗ್ರೆಸ್ ಪಕ್ಷ ಹಾಗೂ ಕೆಲ ಜಾತ್ಯಾತೀತ ಎನ್ನುವ ಕೋಮುವಾದಿ ಪಕ್ಷಗಳು ಒಂದು ಕೋಮಿನ ಜನರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ.