ನವದೆಹಲಿ, ಡಿ 18(Daijiworld News/MB) : ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಹಿಂಸಾಚಾರಗಳು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಈವರೆಗೂ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ 59 ಅರ್ಜಿಗಳು ಸಲ್ಲಿಕ್ಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು ಕಾಯ್ದೆಗೆ ತಡೆ ನೀಡಲು ನಿರಾಕರಿಸಿದೆ.
ಕೇಂದ್ರವು 2020ರ ಜನವರಿ ಎರಡನೇ ವಾರದೊಳಗಾಗಿ ಪ್ರತಿಕ್ರಿಯೆ ನೀಡಬೇಕೆಂದು ಆದೇಶಿಸಿದ್ದು ಈ ಕುರಿತ ವಿಚಾರಣೆಯನ್ನು 2020ರ ಜನವರಿ 22ಕ್ಕೆ ಮುಂದೂಡಿದೆ.
ಈ ತಿದ್ದುಪಡಿ ಪ್ರಕಾರ ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದಿಂದ ಬರುವ ಮುಸ್ಲಿಮರನ್ನು 6 ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತೀಯ ಪೌರತ್ವ ನೀಡಲಾಗುತ್ತದೆ. ಮುಸ್ಲಿಮರನ್ನು ಮಾತ್ರ ಹೊರಗಿಟ್ಟುರುವ ಹಿನ್ನಲೆಯಲ್ಲಿ ದೇಶಾದಾತ್ಯಂತ ವಿರೋಧ ವ್ಯಕ್ತವಾಗಿದ್ದು ಭಾರತ ಜಾತ್ಯತೀತ ರಾಷ್ಟ್ರ. ಹಾಗಾಗಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸರಿಯಲ್ಲ ಎಂದು ಹಲವರ ಅಭಿಪ್ರಾಯವಾಗಿದೆ.
ಹಳೆಯ ಕಾಯ್ದೆಯಲ್ಲಿ ವಿದೇಶಿಗರು ಕಾನೂನು ಬದ್ಧವಾಗಿ ಭಾರತಕ್ಕೆ ವಲಸೆ ಬಂದು ಇಲ್ಲಿ 12 ವರ್ಷ ಅದಕ್ಕಿಂತಲೂ ಹೆಚ್ಚು ವರ್ಷ ನೆಲೆಸಿದ್ದರೆ, ಪೌರತ್ವ ಪಡೆಯಲು ಅರ್ಹರಾಗಿದ್ದರು. ಆದರೆ, ಹೊಸ ತಿದ್ದುಪಡಿ ಕಾಯ್ದೆಯಲ್ಲಿ ಭಾರತಕ್ಕೆ ಮೇಲಿನ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿದ್ದರೂ ಇಲ್ಲಿ 6 ವರ್ಷ ವಾಸಿದ್ದರೆ ಆರು ಧರ್ಮೀಯರು ಭಾರತದ ಪೌರತ್ವ ಪಡೆಯಲು ಅರ್ಹರಾಗಿರುತ್ತಾರೆ. ಇದರ ಅನುಸಾರ 2014ರ ಡಿ.31ರ ಒಳಗೆ ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ನಿರಾಶ್ರಿತರು ಭಾರತದ ಪೌರತ್ವ ಪಡೆಯಲು ಅರ್ಹರಾಗಿದ್ದಾರೆ.