ನವದೆಹಲಿ, ಡಿ 18 (DaijiworldNews/SM): 2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಘೋಷಣೆಯಾಗಿದೆ. ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿರುವ ಹಿರಿಯ ಪತ್ರಕರ್ತೆ ಡಾ. ವಿಜಯಾ ಅವರು ಈ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ವಿಜಯಾ ಅವರ ಆತ್ಮಕಥೆ "ಕುದಿ ಎಸರು" ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
ಇನ್ನು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಬರಹಗಾರ ಶಶಿ ತರೂರ್ ಅವರೂ ಕೂಡ ಭಾರತ ಸರಕಾರದ ಪ್ರತಿಷ್ಟಿತ ಪ್ರಶಸ್ತಿಯಾಗಿರುವ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಅವರ ಆನ್ ಎರಾ ಆಫ್ ಡಾರ್ಕ್ನೆಸ್: ದಿ ಬ್ರಿಟಿಷ್ ಎಂಪೈರ್ ಇನ್ ಇಂಡಿಯಾ ಎಂಬ ಪುಸ್ತಕಕ್ಕೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.
ಇನ್ನು ಕೇಂದ್ರದ ಸಾಹಿತ್ಯ ಅಕಾಡೆಮಿ ತನ್ನ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. 23 ಭಾಷೆಗಳಲ್ಲಿ ಪ್ರಕಟಿಸುವ ಪತ್ರಿಕಾ ಪ್ರಕಟಣೆಯೊಂದನ್ನು ಅಕಾಡೆಮಿ ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಶಶಿ ತರೂರ್ ಹೆಸರು ಸೇರಿಕೊಂಡಿದೆ.
ಪ್ರಶಸ್ತಿಯು ಒಂದು ಲಕ್ಷ ನಗದು ಹಾಗೂ ಸ್ಮರಣಿಕೆ ಒಳಗೊಂಡಿದ್ದು, 2020 ಫೆಬ್ರವರಿ 25ರಂದು ಪ್ರಶಸ್ತಿ ಪ್ರಧಾನ ಸಮಾರಂಭ ನೆರವೇರಲಿದೆ.
ಇನ್ನು ಸಾಮಾಜಿಕ ಅಸಮಾನತೆ, ಶೋಷಣೆ, ದಬ್ಬಾಳಿಕೆ, ಅನ್ಯಾಯಗಳ ವಿರುದ್ಧ ಧ್ವನಿ ಎತ್ತುವ, ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗುವ ಡಾ. ವಿಜಯಾ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕ್ರೀಯಾಶೀಲರಾಗಿದ್ದರು. ತಮ್ಮ ಅಮೂಲ್ಯವಾದ ಸೇವೆಯನ್ನು ಸಮಾಜಕ್ಕೆ ನೀಡುತ್ತಿದ್ದರು. ಅನ್ಯಾಯದ ವಿರುದ್ಧ ಸದಾ ಧ್ವನಿ ಎತ್ತುತ್ತಿದ್ದರು. ಸಾಹಿತ್ಯ ಕ್ಷೇತ್ರ ಹಾಗೂ ಸಮಾಜಿಕ ಕ್ಷೇತ್ರಕ್ಕೆ ಅವರು ಅಪಾರ ಕೊಡುವಗೆ ನೀಡಿದ್ದಾರೆ. ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಸಾರ್ಥಕ ಸೇವೆಗಾಗಿ ಅವರನ್ನು ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಗೊಳಿಸಲಾಗಿದೆ.