ಆಂದ್ರಪ್ರದೇಶ, ಡಿ 19 (Daijiworld News/MB): 60 ವರ್ಷದ ವೃದ್ಧ 4 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಆಂದ್ರಪ್ರದೇಶದ ಗುಂಟ್ಟೂರು ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
60 ವರ್ಷದ ವೃದ್ಧನಾದ ಆರೋಪಿಯು ಬಾಲಕಿಯ ನೆರೆಮನೆಯವನಾಗಿದ್ದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು ಇದನ್ನು ಗಮನಿಸಿದ ಸ್ಥಳೀಯರು ಬಾಲಕಿಯ ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ತನ್ನ ಬಳಿಗೆ ಬರುವುದನ್ನು ನೋಡಿದ ಆರೋಪಿಯು ಆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂತರ ಈ ಕುರಿತು ಪೋಷಕರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಆರೋಪಿಯು ಪರಾರಿಯಾಗಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿ ಲಾಲಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.