ನವದೆಹಲಿ, ಡಿ 19 (Daijiworld News/PY) : ನೂತನ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಭಾರೀ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ಸಿಗರಿಗೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು 2003ರ ಸಂದರ್ಭ ರಾಜ್ಯಸಭೆಯಲ್ಲಿ ಪೌರತ್ವ ಕಾಯ್ದೆಯ ಬಗ್ಗೆ ಮಾತನಾಡಿರುವ ದೃಶ್ಯವನ್ನು ಭಾರತೀಯ ಜನತಾ ಪಾರ್ಟಿ ಬಿಡುಗಡೆಮಾಡಿದೆ.
2003ರ ಸಂದರ್ಭದಲ್ಲಿ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪೌರತ್ವ ಕಾಯ್ದೆಯನ್ನು ಪ್ರೋತ್ಸಾಹಿಸಿ ಮಾತನಾಡಿದ್ದರು, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಕಾಯ್ದೆ ಅಗತ್ಯವಾಗಿದೆ ಎಂದು ಹೇಳಿರುವ ವೀಡಿಯೋವನ್ನು ಬಿಜೆಪಿಯವರು ಟ್ವೀಟ್ ಮಾಡಿದ್ದಾರೆ.
ಸಂಸತ್ತಿನಲ್ಲಿ ಪೌರತ್ವ ಮಂಡನೆಯ ಬಗ್ಗೆ ಚರ್ಚೆ ನಡೆದಾಗ ಮಾತನಾಡಿದ ಅಮಿತ್ ಶಾ ಅವರು, ಹಿಂದೆ ಕಾಂಗ್ರೇಸ್ಸಿಗರು ಪೌರತ್ವವನ್ನು ನೀಡಬೇಕಾಗಿ ಮನವಿ ಮಾಡಿಕೊಂಡಿದ್ದಾರೆ, ಮನಮೋಹನ್ ಸಿಂಗ್ ಹೇಳಿದ ಹೇಳಿಕೆಯನ್ನು ಕೇಳಿದ್ದರೂ ಸಹ ಸರ್ಕಾರ ಪೌರತ್ವ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಲಿಲ್ಲ, ಅವರ ಮನವಿಯಂತೆ ನಾವು ಪೌರತ್ವ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದ್ದಾರೆ.
ಈ ವಿಚಾರವಾಗಿ ಆರೋಪಿಸಿದ ಕಾಂಗ್ರೆಸ್ ಪೌರತ್ವ ಕಾಯ್ದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ನಿಲ್ಲಿಸುವ ಸಲುವಾಗಿ ಬಿಜೆಪಿಗರು ಹೀಗೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.