ನವದೆಹಲಿ, ಡಿ 20 (Daijiworld News/PY) : ದಿಶಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿರುವ ನಾಲ್ವರು ಆರೋಪಿಗಳ ಕುಟುಂಬದ ಸಂಬಂಧಿಕರು ಎನ್ಕೌಂಟರ್ ಪ್ರಕರಣ ಸಂಬಂದ ಸಿಬಿಐ ತನಿಖೆಗೆ ಒತ್ತಾಯಿಸಿ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದ್ದು, ತಮ್ಮ ಪ್ರತಿಯೊಂದು ಕುಟುಂಬಕ್ಕೆ ರೂ.50 ಲಕ್ಷ ಪರಿಹಾರ ನೀಡಬೇಕೆಂದು ಆರೋಪಿಗಳ ಸಂಬಂಧಿಕರು ಕೋರಿದ್ದಾರೆ.
ನವೆಂಬರ್ 29 ರಂದು ಪ್ರಿಯಾಂಕಾ ರೆಡ್ಡಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದು, ನಾಲ್ವರು ಕಾಮುಕರು, ನಂತರ ಆಕೆಯನ್ನು ಹತ್ಯೆ ಮಾಡಿ, ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು.
ಅತ್ಯಾಚಾರ ನಡೆಸಿದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಹಿನ್ನೆಲೆಯಲ್ಲಿ ಕಾಮುಕರನ್ನು ಘಟನಾ ಸ್ಥಳಕ್ಕೆ ಆರೋಪಿಗಳನ್ನು ಕರೆದುಕೊಂಡು ಹೋಗಿದ್ದರು. ಈ ಸಂದರ್ಭ ಆರೋಪಿಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ಪೊಲೀಸರ ಬಳಿಯಿದ್ದ ಪಿಸ್ತೂಲನ್ನು ಕಸಿದುಕೊಂಡು ಹೋಗಲು ಪ್ರಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಕಾಮುಕರ ಮೇಲೆ ಎನ್'ಕೌಂಟರ್ ನಡೆಸಿ ಹತ್ಯೆ ಮಾಡಿದ್ದರು.
ಪ್ರಕರಣ ಸಂಬಂಧ 6 ತಿಂಗಳುಗಳ ಒಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಿದ್ದು, ಎನ್'ಕೌಂಟರ್ ಪ್ರಕರಣದ ತನಿಖೆಯನ್ನು ಈಗಾಗಲೇ ನಿವೃತ್ತಿ ನ್ಯಾಯಾಧೀಶ ವಿ.ಎಸ್.ಸಿರ್' ಪುರ್ಕರ್ ನೇತೃತ್ವವು ನ್ಯಾಯಾಂಗ ತನಿಖೆಗೆ ವಹಿಸಿದ್ದಾರೆ.