ಶ್ರೀನಗರ, ಡಿ 22 (Daijiworld News/MB) : ಭಾರತೀಯ ಸೇನೆಯು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ನೀಲಂ ಕಣಿಯಲ್ಲಿನ ಭಯೋತ್ಪಾದಕ ಶಿಬಿರವನ್ನು ಧ್ವಂಸ ಮಾಡಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಹಲವು ಉಗ್ರರು ಭಾರತೀಯ ಸೇನೆ ನಡೆಸಿದ ದಾಳಿಯಿಂದಾಗಿ ಮೃತಪಟ್ಟಿದ್ದಾರೆಂದು ಎನ್ನಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಉಗ್ರ ಶಿಬಿರ ಎನ್ನಲಾಗಿರುವ ಸ್ಥಳವು ಭಾರತೀಯ ಸೇನೆ ದಾಳಿಯಿಂದ ಹೊತ್ತಿ ಉರಿಯುತ್ತಿರುವ ದೃಶ್ಯ ಹರಿದಾಡುತ್ತಿದೆ.
ಶನಿವಾರ ಮಧ್ಯಾಹ್ನ ಗುರೇಜ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿ ನಡೆಸಿದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ದಾಳಿ ನಡೆಸಿ ಉಗ್ರ ಶಿಬಿರವೊಂದನ್ನು ಪತ್ತೆ ಹಚ್ಚಲಾಗಿತ್ತು.
ಈ ಕುರಿತು ಖಾಸಗಿ ಮಾಧ್ಯಮವೊಂದು ವರದಿ ಮಾಡಿದ್ದು ಉಗ್ರರನ್ನು ಭಾರತಕ್ಕೆ ಕಳುಹಿಸುವ ಉದ್ದೇಶದಿಂದ ಶಿಬಿರವನ್ನು ಎನ್ಒಸಿ ಸಮೀಪದಲ್ಲಿ ಸ್ಥಾಪನೆ ಮಾಡಲಾಗಿದೆ ಎಂದು ತಿಳಿಸಿದೆ.