ಕೇರಳ, ಡಿ 22 (Daijiworld News/MB) : ಕೇರಳದ ಯುವ ಜೋಡಿಯೊಂದು ಪ್ರಿ-ವೆಡ್ಡಿಂಗ್ ಶೂಟ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ಸಿ ವಿರೋಧಿಸಿದ ಫಲಕಗಳನ್ನು ಹಿಡಿದಿದ್ದು ಈ ಪೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಹೋರಾಟಗಳು ಹಿಂಸಾಚಾರಕ್ಕೆ ತಿರುಗು ಗೋಲಿಬಾರ್ ನಡೆಯುತ್ತಿರುವ ಈ ಸಂದರ್ಭದಲ್ಲಿ ಈ ಯುವ ಜೋಡಿ ಶಾಂತಿಯುತವಾಗಿ ಈ ಮಸೂದೆಗಳ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.
ಬಹಳ ವಿಭನ್ನವಾಗಿ ಪ್ರತಿಭಟನೆ ನಡೆಸಿರುವ ಅರುಣ್ ಗೋಪಿ ಹಾಗೂ ಆಶಾ ಶೇಖರ್ ಜೋಡಿ ಡಿ. 18 ರಂದು ತಮ್ನ ಫೇಸ್ಬುಕ್ ಖಾತೆಯಲ್ಲಿ ಈ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ. ಈಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಋಣಾತ್ಮಕ ಹಾಗೂ ಧನಾತ್ಮಕ ಕಾಮೆಂಟ್ ಮಾಡಿದ್ದಾರೆ.
ತಿರುವನಂತಪುರಂ ಜಿಲ್ಲಾ ಮಕ್ಕಳ ಕಲ್ಯಾಣ ಮಂಡಳಿಯ ಖಜಾಂಚಿಯಾಗಿರುವ ಅರುಣ್ , ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ಅಧೀನದಲ್ಲಿರುವ ಮಕ್ಕಳ ಸಂಸ್ಥೆ ಬಾಲಸಂಘಂನ ರಾಜ್ಯಾಧ್ಯಕ್ಷರಾಗಿದ್ದಾರೆ.