ನವದೆಹಲಿ, ಡಿ 23 (Daijiworld News/MB) : ಪ್ರಧಾನಿ ನರೇಂದ್ರ ಮೋದಿ ಜನರನ್ನು ಪ್ರತಿ ಪಕ್ಷಗಳು ಪ್ರಚೋದಿಸಿ ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಹೇಳಿದನ್ನು ಅಲ್ಲಗಳೆದಿರುವ ಕಾಂಗ್ರೆಸ್,"ಮೋದಿ ಹಾಗೂ ಅಮಿತ್ ಶಾ ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ನಂತರ ಎನ್ ಆರ್ ಸಿಯನ್ನು ಜಾರಿಗೆ ತರುವುದಾಗಿ ಹೇಳಿದ್ದು ಜನರಿಗೆ ಭಯ ಮೂಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಆನಂದ್ ಶರ್ಮಾ ಮಾತನಾಡಿ, "ಪೌರತ್ವ ಕಾಯ್ದೆ ಹಾಗೂ ಎನ್ ಆರ್ ಸಿ ವಿರುದ್ಧ ದೇಶದಾತ್ಯಂತ ಭಯದ ವಾತಾವರಣ ಸೃಷ್ಟಿಯಾಗಿರುವಾಗ ಸಂದರ್ಭದಲ್ಲಿ ನರೇಂದ್ರ ಮೋದಿಯವರು ಆ ಸಮಸ್ಯೆಯನ್ನು ಬಗೆಹರಿಸುವ ಗುಣವನ್ನು ಹೊಂದಿರಬೇಕು. ಅವರು ಸೂಕ್ಷ್ಮ ಹಾಗೂ ಗಂಬೀರತೆ ಉಳ್ಳವರಾಗಿದ್ದಾರೆ ರಾಷ್ಟ್ರೀಯ ಏಕೀಕರಣ ಸಮಿತಿಯಲ್ಲಿ ಎಲ್ಲಾ ಸಮಿತಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಈ ವಿಚಾರದ ಕುರಿತು ಚರ್ಚೆ ನಡೆಸಬೇಕು ಎಂದು ಹೇಳಿದರು.