ಕಾಸರಗೋಡು, ಡಿ 24 (Daijiworld News/PY) : ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ನಗರದ ಪ್ರಧಾನ ಅಂಚೆ ಕಚೇರಿಗೆ ಮುತ್ತಿಗೆ ಹಾಕಿದ ಮುಸ್ಲಿಂ ಯೂತ್ ಲೀಗ್ ಜಿಲ್ಲಾ ಸಮಿತಿ ಕಾರ್ಯಕರ್ತರನ್ನು ಹಾಗೂ ನೂರಾರು ಪ್ರತಿಭಟನಾಕಾರರನ್ನು ಡಿ.24ರ ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಯಿಂದ ಅಂಚೆ ಕಚೇರಿಗೆ ಕಾರ್ಯಕರ್ತರು ದಿಗ್ಬಂಧನ ಹಾಕಿ ಪ್ರತಿಭಟನೆ ನಡೆಸಿದ್ದರಿಂದ ಬಲವಂತವಾಗಿ ಪೊಲೀಸರು ಪ್ರತಿಭಟನಾಕಾರನ್ನು ಬಂಧಿಸಿದ್ದಾರೆ.
ಶಾಸಕ ಎನ್.ಎ. ನೆಲ್ಲಿಕುನ್ನು, ಎ.ಕೆ.ಎಂ ಅಶ್ರಫ್ ಸೇರಿದಂತೆ ನೂರಾರು ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.