ನವದೆಹಲಿ ,ಡಿ 24 (Daijiworld News/PY) : ದೇಶದಾತ್ಯಂತ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್.ಆರ್.ಸಿ.ಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಎನ್ಆರ್ ಸಿ ಜಾರಿಗೆ ಹಿಂದೇಟು ಹಾಕಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ನಡೆದ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಕ್ರಮ ನುಸುಳುಕೋರರನ್ನು ಹೊರದಬ್ಬಲು 2024ರೊಳಗೆ ಕೇಂದ್ರ ಸರಕಾರ ದೇಶಾದ್ಯಂತ ಎನ್ಆರ್ಸಿ ಜಾರಿಗೆ ತರಲಾಗುತ್ತದೆ, ಈ ವಿಚಾರವಾಗಿ ಯಾವುದೇ ರಾಜಿ ಇಲ್ಲ ಎಂದ ಅವರು ಈಗ ಈ ಕಾಯ್ದೆಯನ್ನು ಜಾರಿಗೊಳಿಸಲು ಹಿಂದೇಟು ಹಾಕುತ್ತಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ ಅಮಿತ್ ಶಾ, ಎನ್ಆರ್ಸಿ ಅನುಷ್ಠಾನಗೊಳಿಸುವ ಬಗ್ಗೆ ಮಾತನಾಡದೇ ಇರಲು ಬಿಜೆಪಿ ತೀರ್ಮಾನಿಸಿದೆ. ಈ ವಿಚಾರವಾಗಿ ಯಾವುದೇ ಚರ್ಚೆ ಮಾಡದಿರುವುದು ಒಳಿತು, ಮುಂಬರುವ ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ವಿಚಾರದ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.