ಬೆಂಗಳೂರು, ಡಿ 25(Daijiworld News/MSP): ಮಂಗಳೂರು ಗಲಭೆಗೆ ಗುಂಡೇಟಿನಿಂದ ಸತ್ತವರೇ ಕಾರಣ ಎಂದು ತೀರ್ಪು ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಸಿಐಡಿ ನಾಟಕ ಏಕೆ? ಅದನ್ನೂ ನಿಲ್ಲಿಸಿ ಬಿಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.
ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಗೋಲಿಬಾರ್ ನಲ್ಲಿ ಮೃತಪಟ್ಟ ಯುವಕರು ಅಪರಾಧಿಗಳೆಂದಾದರೆ. ಒಂದು ರೂಪಾಯಿ ಪರಿಹಾರ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಈ ಬಗ್ಗೆ ಟ್ವೀಟ್ ಮಾಡಿ ಸಿಎಂ ಅವರನ್ನು ತರಾಟೆಗೆತ್ತಿಕೊಂಡ ಸಿದ್ದರಾಮಯ್ಯ, 'ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ, ಕ್ರೂರಿ ಕೋಮುವಾದಿ ಆಗಬಾರದು. ಮಂಗಳೂರು ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಯಡಿಯೂರಪ್ಪ ನಿರೀಕ್ಷೆಯಂತೆ ಮೊದಲೇ ತೀರ್ಪು ನೀಡಿದ್ದಾರೆ ' ಎಂದು ಕಿಡಿಕಾರಿದ್ದಾರೆ.