ರಾಯಚೂರು, ಡಿ 25 (Daijiworld News/PY) : ಮಂಗಳೂರಿನಲ್ಲಾದ ಹಿಂಸಾಚಾರದ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ಗೆ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಲೇಬೇಕು ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಬುಧವಾರ ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ. ಶ್ರೀರಾಮುಲು, ಮಂಗಳೂರು ಪೊಲೀಸರು ನಡೆಸಿದ ಗೋಲಿಬಾರ್ಗೆ ಮೃತಪಟ್ಟ ನೌಶೀನ್ ಮತ್ತು ಜಲೀಲ್ ಅವರ ಕುಟುಂಬಗಳಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪರಿಹಾರ ಘೋಷಿಸಿದ್ದರು, ಆದರೆ ಈಗ ಪೊಲೀಸರು ಬಿಡುಗಡೆ ಮಾಡಿದ ವೀಡಿಯೋನ್ನು ಪರಿಶೀಲಿಸಿದಾಗ ನೌಶೀನ್ ಕಲ್ಲು ತೂರಾಟದಲ್ಲಿ ಭಾಗಿಯಾಗಿದ್ದಾನೆ ಆದ್ದರಿಂದ ಪರಿಹಾರ ನೀಡಲಾಗುವುದಿಲ್ಲ ಎಂದಿದ್ದಾರೆ ಎಂದು ಹೇಳಿದರು.
'ಮುಖ್ಯಮಂತ್ರಿಯವರ ನಿರ್ಧಾರ ಸರಿಯಿಲ್ಲ, ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಗೋಲಿಬಾರ್ ಪ್ರಕರಣದ ಬಗ್ಗೆ ತನಿಖೆಯಾಗಬೇಕು' ಎಂದು ಆಗ್ರಹಿಸಿದ್ದಾರೆ.