ಬೆಂಗಳೂರು, ಅ.28 (DaijiworldNews/AK): ಸರಕಾರದ ಆಡಳಿತವನ್ನು ಜನತೆ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಸ್ಟಿಂಗ್ ಆಪರೇಷನ್ನಲ್ಲೇ ಇವರು ಕಾಲಹರಣ ಮಾಡುತ್ತಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಟೀಕಿಸಿದರು.

ಅವರು ಬಿಜೆಪಿ ಕಚೇರಿಯಲ್ಲಿ ಮಾತನಾಡಿ, ಕುರ್ಚಿ ಕಚ್ಚಾಟಕ್ಕಾಗಿ ಇವೆಲ್ಲ ನಡೆದಿದೆ. ರಾಜ್ಯದ ಸುಶಿಕ್ಷಿತ ಜನರು ಕಾಂಗ್ರೆಸ್ಸಿನ ದುರಾಡಳಿತ, ಅಭಿವೃದ್ಧಿರಹಿತ ಬರಿಯ ಭ್ರಷ್ಟಾಚಾರವನ್ನು ತಿರಸ್ಕರಿಸಿ ನಿನ್ನೆ ನಡೆದ ಚುನಾವಣೆ ಮೂಲಕ ಆದೇಶ ನೀಡಿದ್ದಾರೆ ಎಂದು ತಿಳಿಸಿದರು. ಸ್ವಾಭಿಮಾನ ಇದ್ದರೆ ಈ ಸರಕಾರ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.
ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಮಾಜಿ ಸಚಿವ ಮತ್ತು ಶಾಸಕ ಕೆ. ಗೋಪಾಲಯ್ಯ, ಅಭ್ಯರ್ಥಿಗಳಾದ ಕೆ.ಎಂ. ಸುರೇಶ್, ಎ.ಪಿ. ರಂಗನಾಥ್, ವಿಧಾನಪರಿಷತ್ ಮಾಜಿ ಸದಸ್ಯ ಡಾ. ಶಿವಯೋಗಿಸ್ವಾಮಿ, ರಾಜ್ಯ ಕಾರ್ಯದರ್ಶಿ ಶ್ರೀಮತಿ ಅಂಬಿಕಾ ಹುಲಿನಾಯ್ಕರ್, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರೀ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಉಪಸ್ಥಿತರಿದ್ದರು.